ರಾಯಚೂರು: ಇಂದು ಮಹರ್ಷಿ ವೇಮನ ಜಯಂತಿ ಅಂಗವಾಗಿ ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಭಾವಚಿತ್ರ ಮೆರವಣಿಗೆ ನಡೆಯಿತು.
ಮಹರ್ಷಿ ವೇಮನ ಜಯಂತಿ, ಭಾವಚಿತ್ರದ ಅದ್ಧೂರಿ ಮೆರವಣಿಗೆ - Maharshi Wayma Jayanti raichur
ಮಹರ್ಷಿ ವೇಮನ ಅವರ ಜಯಂತಿ ಅಂಗವಾಗಿ ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದಲ್ಲಿಂದು ಭಾವಚಿತ್ರ ಮೆರವಣಿಗೆ ಜರುಗಿತು.
ಭಾವಚಿತ್ರ ಮೆರವಣಿಗೆ
ನಗರದ ಬಸವೇಶ್ವರ ವೃತ್ತದಲ್ಲಿ ಶಾಸಕ ಡಾ.ಶಿವರಾಜ್ ಪಾಟೀಲ್ ಅವರು ವೇಮನ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಶ್ರೀಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ವೇಮನ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ತಹಶಿಲ್ದಾರ ಡಾ.ಹಂಪಣ್ಣ, ನಗರಸಭೆ ಅಧಿಕಾರಿಗಳು, ಸಮಾಜದ ಮುಖಂಡರು ಭಾಗವಹಿಸಿದ್ದರು.
ಮೆರವಣಿಗೆಗೆ ಕಲಾ ತಂಡಗಳ ಪ್ರದರ್ಶನ ಮೆರುಗು ನೀಡಿತು.