ರಾಯಚೂರು: ಲಿಂಗಸುಗೂರಲ್ಲಿ ಮಾರಾಟಕ್ಕೆ ಕಳ್ಳಭಟ್ಟಿ ಸಾರಾಯಿ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನ ಅಬಕಾರಿ ಪೊಲಿಸರು ಬಂಧಿಸಿದ್ದಾರೆ.
ಲಿಂಗಸುಗೂರನಲ್ಲಿ ಕಳ್ಳಭಟ್ಟಿ ಸಾರಾಯಿ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ - Man arrested
ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ದಾಳಿ ಮಾಡಿ ಕಳ್ಳಭಟ್ಟಿ ಸಾರಾಯಿ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನ ಬಂಧಿಸಿದ್ದಾರೆ.
ಕಳ್ಳಭಟ್ಟಿ ಸಾರಾಯಿ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ತಾಲ್ಲೂಕಿನ ಫೂಲಭಾವಿ ಕ್ರಾಸ್ ನಲ್ಲಿ ಬೈಕ್ ಮೇಲೆ 10 ಲೀಟರ್ ಕಳ್ಳಭಟ್ಟಿ ಸಾರಾಯಿ ಸಾಗಣೆ ಮಾಡುವಾಗ ಜಪ್ತಿ ಮಾಡಲಾಗಿದೆ.
ಅಮರೇಶ ಮಹಾಂತಪ್ಪ ಐದನಾಳ ಬಂಧಿತ ಆರೋಪಿ. ಆರೋಪಿಯಿಂದ 10 ಲೀಟರ್ ಕಳ್ಳಭಟ್ಟಿ ಸಾರಾಯಿ ಹಾಗೂ ಮೋಟರ್ ಬೈಕ್ ಜಪ್ತಿ ಮಾಡಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮೊಹ್ಮದ ಹುಸೇನ್ ಅಬಕಾರಿ ಉಪ ನಿರೀಕ್ಷಕರು ತಿಳಿಸಿದ್ದಾರೆ.