ರಾಯಚೂರು :ನಗರಸಭೆಯಿಂದ ಪೂರೈಕೆಯಾದ ಕಲುಷಿತ ನೀರಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನಗರದ ಅರಬ್ ಮೊಹಲ್ಲಾ ನಿವಾಸಿ ಆಟೋ ಡ್ರೈವರ್ ಮಹಮ್ಮದ್ ನೂರ್ (43) ಮೃತ ದುರ್ದೈವಿ.
ನಗರಸಭೆಯಿಂದ ಪೂರೈಕೆಯಾದ ಕಲುಷಿತ ನೀರು ಕುಡಿದು ವಾಂತಿ, ಭೇದಿಯಿಂದ ಬಳಲುತ್ತಿದ್ದ ಇವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ, ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಯಜಮಾನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.