ರಾಯಚೂರು: ಹಾಡಹಗಲೇ ಗುತ್ತಿಗೆದಾರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ಪ್ರಕರಣ ತಾಲೂಕು ಕ್ಷೇತ್ರಾಶಿಕ್ಷಣಾಧಿಕಾರಿ ಕಚೇರಿ ಬಳಿ ಟೆಲಿಫೋನ್ ಎಕ್ಸೆಚೇಂಜ್ ಕಚೇರಿ ಎದುರು ನಡೆದಿದೆ. ಮಚ್ಚು ಹಾಗೂ ಕಲ್ಲಿನಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ಮಹೆಬೂಬ ಅಲಿ(35) ಎಂದು ಗುರುತಿಸಲಾಗಿದೆ.
ಮೆಹಬೂಬ್ ಅಲಿ ಗುತ್ತಿಗೆದಾರನಾಗಿದ್ದರು. ಸಂಜೆ ಶಾಲೆ ಬಿಡುವ ಸಮಯಕ್ಕೆ ಮಕ್ಕಳನ್ನು ಕರೆದುಕೊಂಡು ಬೈಕ್ನಲ್ಲಿ ತೆರಳಲು ಮುಂದಾದಾಗ ಹಿಂದಿನಿಂದ ಬಂದ ಕಿಡಿಗೇಡಿಗಳು ಮಚ್ಚಿನಿಂದ ಹಲ್ಲೆ ಮಾಡಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಂದಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದರ್ ಬಜಾರ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.