ಕರ್ನಾಟಕ

karnataka

ETV Bharat / state

ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷರಾಗಿ ಮಾನಪ್ಪ ವಜ್ಜಲ್ ನೇಮಕ - ರಾಯಚೂರು ಸುದ್ದಿ

ಹಟ್ಟಿ ಚಿನ್ನದ ಗಣಿ ಕಂಪನಿಯ ನಿಯಮಿತ ಸಂಸ್ಥೆ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಾನಪ್ಪ ವಜ್ಜಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Manappa Vajjal
ಮಾನಪ್ಪ ವಜ್ಜಲ್

By

Published : Nov 25, 2020, 12:04 PM IST

ರಾಯಚೂರು:ದೇಶದ ಏಕೈಕ ಹಟ್ಟಿ ಚಿನ್ನದ ಗಣಿ ಕಂಪನಿಯ ನಿಯಮಿತ ಸಂಸ್ಥೆ ಅಧ್ಯಕ್ಷ ಸ್ಥಾನ ಮಾಜಿ ಶಾಸಕ ಮಾನಪ್ಪ ವಜ್ಜಲ್ ಅವರಿಗೆ ಒಲಿದಿದೆ. ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮಾನಪ್ಪ ವಜ್ಜಲ್ 2008ರಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾದರು. ಬಳಿಕ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಳ್ಳುವ ಮೂಲಕ 2013ರಲ್ಲಿ ಜೆಡಿಎಸ್‌ನಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಶಾಸಕರಾಗಿ ಎರಡು ಬಾರಿ ಆಯ್ಕೆಯಾದರು.

ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ವೇಳೆ ಅವಧಿಗೆ ಮುನ್ನ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಬಿಜೆಪಿ ಸೇರ್ಪಡೆಗೊಂಡು ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ರು. ಇದೀಗ ರಾಜ್ಯ ಸರ್ಕಾರ ಮಾನಪ್ಪ ವಜ್ಜಲ್‌ರನ್ನ ಹಟ್ಟಿ ಚಿನ್ನದ ಗಣಿ ಕಂಪನಿಯ ನಿಯಮಿತ ಸಂಸ್ಥೆಯ ಅಧ್ಯಕ್ಷರನ್ನಾಗಿ ನೇಮಿಸಿದೆ.

ABOUT THE AUTHOR

...view details