ರಾಯಚೂರು: ಜಿಲ್ಲೆಯ ಲಿಂಗಸುಗೂರಲ್ಲಿ ಮಾಸ್ಕ್ ವಿತರಣೆ ಮೂಲಕ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಮಾಸ್ಕ್ ದಿನಾಚರಣೆ ಆಚರಿಸಿದರು.
ಬಿಜೆಪಿ ಹಿರಿಯ ಮುಖಂಡ ನಾಗಪ್ಪ ವಜ್ಜಲ ನೇತೃತ್ವದಲ್ಲಿ ಸಾರ್ವಜನಿಕ ಆಸ್ಪತ್ರೆ, ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಮಾಸ್ಕ್ ಧರಿಸಿ ಕೊರೊನಾ ಓಡಿಸಿ ಘೋಷಣೆ ಹಾಕುತ್ತಾ ಜಾಗೃತಿ ಜಾಥಾ ನಡೆಸಿದರು. ಬಿಜೆಪಿ ಮುಖಂಡ ಡಾ. ಶಿವಬಸಪ್ಪ ಮಾತನಾಡಿ, ಕೊರೊನಾ ವೈರಸ್ ಹರಡದಂತೆ ಜನತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮೇಲಿಂದ ಮೇಲೆ ಕೈ ತೊಳೆದುಕೊಳ್ಳಬೇಕು. ಮಾಸ್ಕ್ ಕಡ್ಡಾಯವಾಗಿ ಧರಿಸಿ ಕೋವಿಡ್-19 ಹರಡದಂತೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದರು.