ಕರ್ನಾಟಕ

karnataka

ಬಿಎಸ್​ವೈ, ಕಟೀಲ್ ​ಇಬ್ಬರು ರಾಜ್ಯದ ನಿಜವಾದ ಜೋಡೆತ್ತುಗಳು: ಎನ್. ರವಿಕುಮಾರ್

By

Published : Nov 13, 2020, 4:47 PM IST

Updated : Nov 13, 2020, 5:11 PM IST

ಆರ್.ಆರ್.ನಗರ, ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದಾರೆ. ಮುಂಬರುವ ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಅಲ್ಲದೇ ಬಿಎಸ್​ವೈ ನಳಿನ್ ಕುಮಾರ್ ಕಟೀಲ್ ಇಬ್ಬರು ರಾಜ್ಯದ ನಿಜವಾದ ಜೋಡೆತ್ತುಗಳು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದಾರೆ.

ಎನ್. ರವಿಕುಮಾರ್
ಎನ್. ರವಿಕುಮಾರ್

ರಾಯಚೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಬ್ಬರು ರಾಜ್ಯದ ನಿಜವಾದ ಜೋಡೆತ್ತುಗಳು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದಾರೆ.

ಜಿಲ್ಲೆಯ ಮಸ್ಕಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಆರ್.ಆರ್.ನಗರ, ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದಾರೆ. ಮುಂಬರುವ ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳಿಸಿ, ಜಯ ಗಳಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಮಸ್ಕಿ ಬೈ ಎಲೆಕ್ಷನ್ ಬೂತ್ ಮಟ್ಟದಿಂದ ಪಕ್ಷವನ್ನ ಸಂಘಟಿಸುವ ಮೂಲಕ ಪ್ರತಾಪಗೌಡ ಪಾಟೀಲ್​ರನ್ನು ಗೆಲ್ಲಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್

ಕಾಂಗ್ರೆಸ್ ಪಕ್ಷ ರಾಜ್ಯದ ಅಭಿವೃದ್ದಿಗಿಂತ ಸ್ವ ಅಭಿವೃದ್ದಿಗೆ ಹೆಚ್ಚು ಆದ್ಯತೆ ನೀಡುತ್ತಿದೆ. ಹೀಗಾಗಿ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷವನ್ನ ಮೂಲೆ ಗುಂಪು ಮಾಡಿದ್ದಾರೆ. ಕಾಂಗ್ರೆಸ್​​ನ ಇಂದಿನ ಪರಿಸ್ಥಿತಿ ಎತ್ತು ಏರಿಗೆ ಎಳೆದರೆ, ಎಮ್ಮೆ ಕೆರೆಗೆ ಎಳೆಯಿತು ಎನ್ನುವ ಹಾಗಿದೆ ಎಂದರು.

ಆರ್. ಬಸವನಗೌಡ ತುರುವಿಹಾಳ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಆದ್ರೆ ಆರ್. ಬಸವನಗೌಡ ತುರುವಿಹಾಳರನ್ನ ಬಿಜೆಪಿ ಪರಿಚಯಸಿದ್ದು, ಬಿಜೆಪಿ ಬೆನ್ನಿಗೆ ಚೂರಿಹಾಕಿ ಕಾಂಗ್ರೆಸ್ ಸೇರಿದ್ದಾರೆ. ಮುಂಬರುವ ದಿನಗಳಲ್ಲಿ ಮತದಾರ ಅವರಿಗೆ ತಕ್ಕ ಪಾಠವನ್ನ ಕಲಿಸುತ್ತಾನೆ ಎಂದರು.

Last Updated : Nov 13, 2020, 5:11 PM IST

ABOUT THE AUTHOR

...view details