ಕರ್ನಾಟಕ

karnataka

ETV Bharat / state

ರಾಯಚೂರು ಜಿಲ್ಲೆಯಲ್ಲಿ ಆಯುಷ್​ ವೈದ್ಯರಿಂದ ಸಾಮೂಹಿಕ ರಾಜೀನಾಮೆ - ಬೇಡಿಕೆ ಈಡೇರಿಸದ ಹಿನ್ನೆಲೆ ಆಯುಷ್ ವೈದ್ಯರಿಂದ ರಾಜೀನಾಮೆ

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸದ ಹಿನ್ನೆಲೆ ರಾಯಚೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆಯುಷ್​ ವೈದ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.

Mass resignation from Ayush doctor
ಆಯುಷ್​ ವೈದ್ಯರಿಂದ ಸಾಮೂಹಿಕ ರಾಜೀನಾಮೆ

By

Published : Jul 16, 2020, 10:59 AM IST

ರಾಯಚೂರು:ಸರ್ಕಾರದ ವೇತನ ತಾರತಮ್ಯ ನೀತಿ ವಿರೋಧಿಸಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆಯುಷ್ ವೈದ್ಯರು ಆರೋಗ್ಯ ಇಲಾಖೆಗೆ ಸಾಮೂಹಿಕ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ ಸುಮಾರು 70 ಜನ ಆಯುಷ್ ವೈದ್ಯರು ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ವೇತನ ಹೆಚ್ಚಳ ಮಾಡುವುದು, ಸೇವಾ ಭದ್ರತೆ ಒದಗಿಸುವುದು, ಸೇವೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಮನವಿಗೆ ಸ್ಪಂದಿಸದ ಹಿನ್ನೆಲೆ ಕಳೆದ ಮೇ.5 ರಿಂದ 12 ರವರೆಗೆ ರಾಜ್ಯಾದ್ಯಂತ ಕಪ್ಪು ಪಟ್ಟಿ ಧರಿಸಿ ಹೋರಾಟ ಮಾಡಿದ್ದೇವೆ. ಆದ್ರೂ ಸರಕಾರ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ. ಹೀಗಾಗಿ ಸಾಮೂಹಿಕ ರಾಜೀನಾಮೆ ನೀಡಿದ್ದೇವೆ ಎಂದು ಆಯುಷ್ ವೈದ್ಯರು ತಿಳಿಸಿದ್ದಾರೆ.

ಡಾ. ನಾಗೇಶ್ ಶ್ಯಾವಿ, ಆಯುಷ್ ವೈದ್ಯ

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಅಧಿಕಾರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ABOUT THE AUTHOR

...view details