ರಾಯಚೂರು:ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ದೇಶದಲ್ಲಿ ಇದೇ ಮೊದಲ ಬಾರಿಗೆ ಸೆ. 19ರಂದು ಮೆಗಾ ಇ ಲೋಕ ಅದಾಲತ್ ಆಯೋಜಿಸಿ ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಕಕ್ಷಿದಾರರಿಗೆ ಸುವರ್ಣ ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಹೇಳಿದರು.
ಶುಕ್ರವಾರ ಬೆಂಗಳೂರಿನ ಹೈಕೋರ್ಟ್ನಿಂದ ವಿಡಿಯೋ ಸಂವಾದ ಉದ್ದೇಶಿಸಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಇದೇ ಮೊದಲ ಬಾರಿಗೆ ಇ ಅದಾಲತ್ ಹಮ್ಮಿಕೊಳ್ಳಲಾಗಿತ್ತಿದ್ದು, ರಾಜಿ ಸಂಧಾನ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿ ನ್ಯಾಯ ಒದಗಿಸುವ ಕೆಲಸ ಮಾಡಲಾಗುತ್ತದೆ. ಜಾತಿ, ಧರ್ಮ, ಆರ್ಥಿಕ ಸ್ಥಿತಿಗತಿಗಳನ್ನು ಹೊರತುಪಡಿಸಿ ಸರ್ವರರಿಗೂ ನ್ಯಾಯವನ್ನು ಸಕಾಲದಲ್ಲಿ ಒದಗಿಸಲು ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ.