ಲಿಂಗಸುಗೂರು:ಗುಂಪುಗಾರಿಕೆಯಲ್ಲಿ ಕಾಂಗ್ರೆಸ್ ಬೆತ್ತಲಾಗಿದೆ. ಇದು ಮೈಸೂರು ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ನಡುವಿನ ವೈಮನಸ್ಸು ಬಹಿರಂಗವಾಗಿದ್ದು, ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಕಾಂಗ್ರೆಸ್ ಗುಂಪುಗಾರಿಕೆಯಲ್ಲಿ ಬೆತ್ತಲಾಗಿದೆ: ಸಚಿವ ಕೆ.ಎಸ್ ಈಶ್ವರಪ್ಪ - eshwarappa reaction on congress groupism,
ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಲಿಂಗಸುಗೂರಿನಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಗುಂಪುಗಾರಿಕೆಯಲ್ಲಿ ಬೆತ್ತಲಾಗಿದೆ ಎಂದು ಕುಟುಕಿದ್ದಾರೆ.
ಈಶ್ವರಪ್ಪ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಧ್ಯದ ಭಿನ್ನಮತ ಸ್ಫೋಟವಾಗಿದೆ. ಹೀಗಾಗಿ ರಾಜ್ಯದಲ್ಲಿ ಬಲಿಷ್ಠವಾಗಿರುವ ಬಿಜೆಪಿ ಉಪ ಚುನಾವಣೆ ಎಲ್ಲಾ ಕ್ಷೇತ್ರಗಳಲ್ಲೂ ಸುಲಭವಾಗಿಯೇ ಜಯ ಸಾಧಿಸಲಿದೆ.
ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಅಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಶುದ್ಧ ಕುಡಿಯುವ ನೀರಿನ ಘಟಕಗಳ ಅನುಷ್ಠಾನ ವೈಫಲ್ಯತೆ ಬಗ್ಗೆ ತನಿಖೆಗೆ ಸದನ ಸಮಿತಿ ರಚಿಸಲಾಗಿದೆ. ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.