ರಾಯಚೂರು: ಕೊರೊನಾ ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಲಾಕ್ಡೌನ್ ವಿಧಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ನಿಯಮ ಪಾಲಿಸದೇ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸಾರ್ವಜನಿಕರಲ್ಲಿ ಪ್ರಶ್ನೆ ಮೂಡಿಸಿದೆ.
ಜಿಲ್ಲೆಯ ಸಿಂಧನೂರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಾಗರಿಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮಾಡಲಾಯಿತು. ಇಲ್ಲಿ ಯಾವುದೇ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸದೇ ಇರುವುದು ಸ್ಥಳೀಯರಲ್ಲಿ ಕೊಂಚ ಅಸಮಾಧಾನ ಮೂಡುವಂತೆ ಮಾಡಿತು.