ರಾಯಚೂರು:ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಕೇವಲ ಊಹಾಪೋಹ ಎಂದು ಕಾರ್ಮಿಕ ಹಾಗೂ ಸಕ್ಕರೆ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಕೇವಲ ಊಹಾಪೋಹ: ಸಚಿವ ಶಿವರಾಮ್ ಹೆಬ್ಬಾರ್ - ನಾಯಕತ್ವ ಬದಲಾವಣೆ ಕೇವಲ ವದಂತಿ
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೇವಲ ವದಂತಿ. ಕೇಂದ್ರ ಹಾಗೂ ರಾಜ್ಯದಲ್ಲಿ ಸಮರ್ಥ ನಾಯಕತ್ವದಲ್ಲಿ ಸರ್ಕಾರ ಮುನ್ನಡೆಯುತ್ತಿದೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕೇವಲ ವದಂತಿಯಾಗಿದ್ದು, ಕೇಂದ್ರ ಹಾಗೂ ರಾಜ್ಯದಲ್ಲಿ ಸಮರ್ಥ ನಾಯಕತ್ವದಲ್ಲಿ ಸರ್ಕಾರ ಮುನ್ನಡೆಯುತ್ತಿದೆ. ಸಚಿವ ಸಂಪುಟ ವಿಸ್ತರಣೆ, ಪುನಾರಚನೆಗೆ ಮುಖ್ಯಮಂತ್ರಿ ಪರಮಾಧಿಕಾರವನ್ನ ಹೊಂದಿದ್ದಾರೆ. ಹೆಚ್.ವಿಶ್ವನಾಥ್, ಎಂ.ಟಿ.ಬಿ. ನಾಗರಾಜ್ಗೆ ಸಚಿವ ಸ್ಥಾನ ನೀಡುವ ಕುರಿತಂತೆ ಸಿಎಂ ತೀರ್ಮಾನ ಕೈಗೊಳ್ಳುತ್ತಾರೆ.
ರಾಜ್ಯ ರಾಜಕಾರಣದಲ್ಲಿ ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ ಎಂಬ ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ನನಗೆ ಮಾಹಿತಿಯಿಲ್ಲ. ನಾನು ಪ್ರವಾಸದಲ್ಲಿದ್ದೇನೆ. ಆ ವಿಚಾರವನ್ನು ತಿಳಿದುಕೊಂಡು ಉತ್ತರಿಸುತ್ತೇನೆ ಎಂದರು.