ರಾಯಚೂರು:ಹೊಸಬರಿಗೆ, ಪ್ರದೇಶವಾರು ಹಾಗೂ ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ ನೀಡಬೇಕು ಎಂದು ಬಿಜೆಪಿ ಶಾಸಕ ಕೆ.ಶಿವನಗೌಡ ನಾಯಕ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಪದೇ ಪದೆ ಸಚಿವರಾದವರನ್ನು ಬದಲಾಯಿಸುವ ಮೂಲಕ ಹೊಸಬರಿಗೆ ಅವಕಾಶ ನೀಡಬೇಕು. ಪ್ರದೇಶವಾರು, ಹಿರಿತನದ ಆಧಾರದಲ್ಲಿ ಸಚಿವ ಸ್ಥಾನ ನೀಡುವಂತಾಗಬೇಕು. 20 ತಿಂಗಳ ಅವಧಿ ಬಳಿಕ ಹಾಲಿ ಇರುವ ಎಲ್ಲಾ ಸಚಿವರನ್ನ ತೆಗೆದು ಹೊಸಬರಿಗೆ ಅವಕಾಶ ಕೊಡಬೇಕು. ಮುಂದಿನ ದಿನಗಳಲ್ಲಿ ನನಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು.