ಕರ್ನಾಟಕ

karnataka

ETV Bharat / state

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಶ್ರೀರಾಮುಲು - ಜಿಲ್ಲಾ ಮಟ್ಟದ ಯುವಜನೋತ್ಸವ ರಾಯಚೂರು ಸುದ್ದಿ

ರಾಯಚೂರಿನಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ 2019-2020 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಚಾಲನೆ ನೀಡಿದರು‌.

raichur
ಸಚಿವ ಶ್ರೀರಾಮುಲು

By

Published : Dec 25, 2019, 11:33 AM IST

ರಾಯಚೂರು:ಜಿಲ್ಲಾ ಮಟ್ಟದ ಯುವಜನೋತ್ಸವ 2019-2020 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಚಾಲನೆ ನೀಡಿದರು‌.

ಜಿಲ್ಲಾ ಮಟ್ಟದ ಯುವಜನೋತ್ಸವ

ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವ, ಯುವಕರು ಸ್ವಾವಲಂಬಿ ಜೀವನ ನಡೆಸುವುದಕ್ಕೆ ಸರ್ಕಾರ ಕೌಶಲ್ಯ ತರಬೇತಿ‌ ನೀಡುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಯುವಕರು ಸಹ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಕೃಷಿ, ವ್ಯಾಪಾರ, ಕೈಗಾರಿಕೆ ಹಾಗೂ ಸಮಾಜ ಸೇವೆಯಲ್ಲಿ‌ ತೊಡಗಬೇಕು ಎಂದು ಹೇಳಿದರು.

ಇನ್ನು ಕಾರ್ಯಕ್ರಮದಲ್ಲಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ಬಸವನಗೌಡ ದದ್ದಲ್, ಜಿ.ಪಂ‌. ಸಿಇಒ ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ಡಾ.ಸಿ.ಬಿ.ವೇದಮೂರ್ತಿ, ಯುವಜನ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details