ರಾಯಚೂರು :ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾಗೂ ಮನೆಗಳ ಹಾನಿಯಾಗಿವೆ. ನೈಸರ್ಗಿಕ ವಿಪತ್ತುಗಳ ಪರಿಹಾರ ನಿಧಿಯಡಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮಳೆ ಹಾನಿ.. ಪರಿಹಾರ ಕಾರ್ಯಕ್ಕಾಗಿ ಜಿಲ್ಲಾಧಿಕಾರಿಗೆ ಶಾಸಕ ಬಸನಗೌಡ ದದ್ದಲ್ ಮನವಿ
ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಶಾಸಕರು, ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ರಾಯಚೂರು ಗ್ರಾಮೀಣ ಕ್ಷೇತ್ರದ ಹಲವಾರು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿದೆ, ಸಾವಿರಾರು ಎಕರೆ ಬೆಳೆ ನಾಶವಾಗಿದೆ, ಅಲ್ಲದೆ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಗಳು, ಸೇತುವೆಗಳಿಗೆ ಹಾನಿಯಾಗಿದೆ ಎಂದು ತಿಳಿಸಿದರು.
ಮಳೆ ಹಾನಿ
ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಶಾಸಕರು, ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ರಾಯಚೂರು ಗ್ರಾಮೀಣ ಕ್ಷೇತ್ರದ ಹಲವಾರು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿದೆ. ಸಾವಿರಾರು ಎಕರೆ ಬೆಳೆ ನಾಶವಾಗಿದೆ. ಅಲ್ಲದೆ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಗಳು, ಸೇತುವೆಗಳಿಗೆ ಹಾನಿಯಾಗಿದೆ ಎಂದು ತಿಳಿಸಿದರು.
ಮಳೆಯಿಂದ ಹಾನಿಗೊಳಗಾದ ಗ್ರಾಮಗಳ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡುವುದು, ರಸ್ತೆ ಮತ್ತು ಸೇತುವೆ ಕಾಮಗಾರಿ ನೈಸರ್ಗಿಕ ವಿಪತ್ತುಗಳ ಪರಿಹಾರ ನಿಧಿಯಡಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.