ಕರ್ನಾಟಕ

karnataka

ETV Bharat / state

ಹದಗೆಟ್ಟ ರಸ್ತೆಗಳ ದುರಸ್ತಿಗೆ ಮುಂದಾಗುವಂತೆ ಅಧಿಕಾರಿಗಳಿಗೆ ಶಾಸಕರ ಸೂಚನೆ - ಶಾಸಕ ಬಸನಗೌಡ ದದ್ದಲ್

ಇತ್ತೀಚೆಗೆ ಸಂಭವಿಸಿದ ನೆರೆ ಹಾವಳಿಯಿಂದ ಜಿಲ್ಲೆಯ ಅನೇಕ ರಸ್ತೆಗಳು ಹಾಳಾಗಿವೆ. ಹಲವು ಸೇತುವೆಗಳು ಕುಸಿದು ಬಿದಿದ್ದು, ಕೆಲವಡೆ ಸಂಪರ್ಕ ಕಡಿದುಕೊಂಡಿವೆ. ಗ್ರಾಮೀಣ ಕ್ಷೇತ್ರಗಳಲ್ಲಿ ಸೂಕ್ತ ಸಂಪರ್ಕ ಕಲ್ಪಿಸಲು ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ, ಜನರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಬಸನಗೌಡ ದದ್ದಲ್ ಮನವಿ ಮಾಡಿದರು.

ಹದಗೆಟ್ಟ ರಸ್ತೆಗಳ ದುರಸ್ತಿಗೆ ಶಾಸಕ ಬಸನಗೌಡ ದದ್ದಲ್ ಸೂಚನೆ

By

Published : Sep 28, 2019, 6:21 AM IST

ರಾಯಚೂರು: ನೆರೆ ಹಾವಳಿಯಿಂದ ಹದಗೆಟ್ಟಿರುವ ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ, ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಶಾಸಕ ಬಸನಗೌಡ ದದ್ದಲ್ ಅವರು ಲೋಕೋಪಯೋಗಿ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಹದಗೆಟ್ಟ ರಸ್ತೆಗಳ ದುರಸ್ತಿಗೆ ಶಾಸಕ ಬಸನಗೌಡ ದದ್ದಲ್ ಸೂಚನೆ

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿ ನಿಲಯಗಳು ಹದಗೆಟ್ಟಿವೆ. ಸ್ನಾನ ಮತ್ತು ಶೌಚಾಲಯ ಸಮಸ್ಯೆಗಳಿಂದ ಅವರಿಗೆ ತೊಂದರೆಯಾಗುತ್ತಿದೆ. ಸುಧಾರಣೆಯ ಕ್ರಮಗಳ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ತಾಲೂಕಿನ ಹಳ್ಳಿಗಳಲ್ಲಿ ಶಿಥಿಲಗೊಂಡಿರುವ ವಿದ್ಯುತ್ ಕಂಬಗಳನ್ನು ಸರಿಪಡಿಸಿ, ಮುಂದಾಗಲಿರುವ ಅಪಾಯವನ್ನು ತಪ್ಪಿಸಬೇಕು. ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರ್ಮಾಣ ಹಂತದಲ್ಲಿರುವ ಆಸ್ಪತ್ರೆಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇದೇ ಸಂದರ್ಭದಲ್ಲಿ ಶಾಸಕ ಬಸನಗೌಡ ದದ್ದಲ್ ಅವರು ಸಭೆಯಲ್ಲಿ ಗೈರು ಆಗಿರುವ ಅಧಿಕಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ABOUT THE AUTHOR

...view details