ರಾಯಚೂರು: ತುಂಗಭದ್ರಾ ನದಿಗೆ ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ಗಂಗೆ ಪೂಜೆ ನೇರವೇರಿಸಿ ಬಾಗಿನ ಅರ್ಪಿಸಿದರು.
ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿದ ಶಾಸಕ ಬಸವನಗೌಡ ದದ್ದಲ್ - ತುಂಗಭದ್ರಾ ನದಿ
ತುಂಗಭದ್ರಾ ನದಿಗೆ ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ರಾಜಲಬಂಡಾ ಅಣೆಕಟ್ಟು ಬಳಿ ವಿಶೇಷ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.
MLA basavana gowdha daddal
ತಾಲೂಕಿನ ರಾಜಲಬಂಡಾ ಅಣೆಕಟ್ಟು ಬಳಿ ನದಿಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಬಾಗಿನ ಅರ್ಪಿಸಿದರು. ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿದ್ದು, ಇದರಿಂದ ಹಳ್ಳ, ಕೊಳ್ಳ ತುಂಬಿ ಹರಿಯುತ್ತಿವೆ. ಜಲಾಶಯಗಳು ಸಹ ಭರ್ತಿಯಾಗಿವೆ. ಅಲ್ಲದೇ ಹೆಚ್ಚುವರಿ ನೀರನ್ನು ನದಿಗೆ ಹರಿ ಬೀಡಲಾಗುತ್ತಿದೆ. ಕೃಷಿ ಚಟುವಟಿಕೆಗಳಿಗೆ ಕೂಡ ಅನುಕೂಲವಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ ಎಂದು ಹೇಳಿದರು.
ಈ ವೇಳೆ ಸ್ಥಳೀಯ ಮುಖಂಡರು, ಬೆಂಬಲಿಗರು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಶಾಸಕರಿಗೆ ಸಾಥ್ ನೀಡಿದರು.