ಲಿಂಗಸುಗೂರು :ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಕೃಷಿ ಇಲಾಖೆ ಹೆಚ್ಚಿನ ಮುತುವರ್ಜಿವಹಿಸಿ ಸೌಲಭ್ಯ ಕಲ್ಪಿಸಲು ಮುಂದಾಗಬೇಕು ಎಂದು ಶಾಸಕ ಡಿ ಎಸ್ ಹೂಲಗೇರಿ ಸೂಚಿಸಿದರು.
ರೈತ ಸಂಪರ್ಕ ಕೇಂದ್ರದಿಂದ ರಿಯಾಯಿತಿ ದರದಲ್ಲಿ ನೀಡಲಾಗುವ ಬಿತ್ತನೆ ಬೀಜ ವಿತರಿಸಿ ಮಾತನಾಡಿದ ಅವರು, ರೈತರ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡು ಮಣ್ಣಿನ ಫಲವತ್ತತೆ ಆಧರಿಸಿ ಬಿತ್ತನೆ ಬೀಜ ವಿತರಣೆಗೆ ಸೂಚನೆ ನೀಡಿದರು.