ರಾಯಚೂರು:ಜೆಡಿಎಸ್ನ ಮಾನವಿ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಪತ್ರಕರ್ತರ ಮೇಲೆ ಗರಂ ಆದ ಪ್ರಸಂಗ ನಡೆದಿದೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವ ಹಾಲಪ್ಪ ಆಚಾರ್ ಅಧ್ಯಕ್ಷತೆಯಲ್ಲಿ ಕೋವಿಡ್-19 ಸೋಂಕು ನಿರ್ವಹಣೆ, ನಿಯಂತ್ರಣ ಹಾಗೂ 2021ನೇ ಸಾಲಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಕೈಗೊಂಡ ಕ್ರಮಗಳ ಕುರಿತಂತೆ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
ಈ ಸಭೆಯ ನಂತರ ಸಚಿವರು ಮಾಧ್ಯಮದೊಂದಿಗೆ ಮಾತನಾಡುತ್ತಿದ್ದರು. ಆಗ ಪತ್ರಕರ್ತರು ಮಾನವಿ ಪಟ್ಟಣದಲ್ಲಿ ಇಂದು ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಹಾಗು ಸಲಕರಣೆ ಇಲ್ಲದೆ ಉದ್ಘಾಟನೆಯಾಗುತ್ತಿದೆ ಎನ್ನುವ ಕುರಿತಂತೆ ಸಚಿವರನ್ನು ಪ್ರಶ್ನಿಸಿದ್ದಾರೆ.
ಈ ವೇಳೆ ಮಧ್ಯಪ್ರವೇಶಿಸಿದ ಶಾಸಕ ರಾಜಾ ವೆಂಕಟಪ್ಪ ನಾಯಕ, ಕೈ ಸನ್ನೆ ಮೂಲಕ ಮೈಕ್ ಆಫ್ ಮಾಡಿ ಪತ್ರಕರ್ತರ ಮೇಲೆ ಅಸಂಬದ್ದ ಪದಗಳನ್ನು ಬಳಸಿ ದುರ್ವರ್ತನೆ ತೋರಿದ್ದಾರೆ. ಇದಕ್ಕೆ ಪತ್ರಕರ್ತರು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಹಾಗು ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.
ಇದನ್ನೂ ಓದಿ:ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಮತ್ತೆ ಕೊರೊನಾ ಅಬ್ಬರ.. ನಿನ್ನೆ 32 ಕೇಸ್, ಇಂದು 11 ಮಕ್ಕಳಿಗೆ ಕೊರೊನಾ ದೃಢ