ರಾಯಚೂರು: ಸಹೋದರನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಜಿಲ್ಲೆಯ ಸಿಂಧನೂರು ಪಟ್ಟಣದ ಪಿಡಬ್ಲ್ಯೂಡಿ ಕಾಲೋನಿಯಲ್ಲಿರುವ ಮನೆಯಲ್ಲಿ ಇಂದಿನಿಂದ 10 ದಿನಗಳ ಕಾಲ ಕ್ವಾರಂಟೈನ್ ಆಗಿದ್ದಾರೆ. ಹೀಗಾಗಿ ನನ್ನನ್ನು ಯಾರೂ ಭೇಟಿ ಮಾಡಲು ಬರಬೇಡಿ. ಮುಖ್ಯವಾದ ಕೆಲಸವಿದ್ದರೆ ದೂರವಾಣಿ ಮೂಲಕ ಸಂಪರ್ಕಿಸುವಂತೆ ವಾಟ್ಸ್ ಅಪ್ ಮೂಲಕ ಕ್ಷೇತ್ರದ ಜನತೆಗೆ ಮನವಿ ಮಾಡಿದ್ದಾರೆ.