ರಾಯಚೂರು:ಮಸ್ಕಿ ಬೈ ಎಲೆಕ್ಷನ್ ಚುನಾವಣೆ ಪ್ರಚಾರಕ್ಕೆ ಬಂದ ಸಿಎಂ ಬಿ.ಎಸ್. ಯಡಿಯೂರಪ್ಪನವರನ್ನು ಜೆಡಿಎಸ್ ಶಾಸಕ ಭೇಟಿಯಾಗಿರುವುದು ಭಾರಿ ಕೌತುಕ ಮೂಡಿಸಿದೆ.
ಜಿಲ್ಲೆಯ ಸಿಂಧನೂರು ಪಟ್ಟಣದ ಸರ್ಕ್ಯೂಟ್ ಹೌಸ್‌ನಲ್ಲಿ ತಂಗಿರುವ ಸಿಎಂ, ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಅವರನ್ನು ಭೇಟಿ ಮಾಡಿದ್ದಾರೆ. ಮಸ್ಕಿ ಬೈ ಎಲೆಕ್ಷನ್ ಹಿನ್ನೆಲೆ ನಿನ್ನೆ ಮಸ್ಕಿ ಪಟ್ಟಣದಲ್ಲಿ ಆಯೋಜಿಸಿದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಸಿಂಧನೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಸಿಎಂ ವಾಸ್ತವ್ಯ ಮಾಡಿದ್ದಾರೆ. ಇಂದು ಬೆಳಗ್ಗೆ ಜೆಡಿಎಸ್ ಮುಖಂಡ ವೆಂಕಟ್‌ರಾವ್ ನಾಡಗೌಡ ಅವರನ್ನು ಸಿಎಂ ಭೇಟಿ ಮಾಡಿ ಹಲವು ವಿಚಾರ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.