ರಾಯಚೂರು:ಎರಡನೇ ಬಾರಿಗೆ ದೇಶದ ಪ್ರಧಾನಿಯಾಗಿ ಆಯ್ಕೆಯಾದ ನರೇಂದ್ರ ಮೋದಿ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದ್ದಾರೆ.
ಪ್ರಧಾನಿ ಮೋದಿ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ: ಸಂಸದ ರಾಜಾ ಅಮರೇಶ್ವರ ನಾಯಕ
ಎರಡನೇ ಅವಧಿಗೆ ಪ್ರಧಾನಿಯಾಗಿರುವ ಮೋದಿ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದ್ದಾರೆ.
ಸಂಸದ ರಾಜಾ ಅಮರೇಶ್ವರ ನಾಯಕ
ನಗರದ ಪ್ರತಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19ನಿಂದ ಸಾರ್ವಜನಿಕರು ಆರ್ಥಿಕವಾಗಿ ತತ್ತರಿಸಿದಾಗ ಎಲ್ಲರಿಗೂ ಅನುಕೂಲವಾಗುವ ನಿಟ್ಟಿನಲ್ಲಿ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಈ ಮೂಲಕ ಶ್ರಮಿಕರಿಗೆ, ಕುಶಲಕರ್ಮಿಗಳಿಗೆ, ಎಲ್ಲಾ ವರ್ಗದವರ ನೆರವಿಗೆ ಪ್ರಧಾನಿ ಬಂದಿದ್ದಾರೆ.
ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿರುವ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಪ್ರಧಾನಿ ಮೋದಿ ದೇಶದಲ್ಲಿ ಹಲವು ಸುಧಾರಣೆ ತಂದಿದ್ದಾರೆ ಎಂದರು.