ಕರ್ನಾಟಕ

karnataka

ETV Bharat / state

ದಲಿತ ಯುವಕನ ಕೊಲೆ ಪ್ರಕರಣ: ಆರೋಪಿಗಳಿಗೆ ಉಗ್ರ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ - Murder of Dalit youth

ವಿಜಯಪುರದಲ್ಲಿ ದಲಿತ ಯುವಕನನ್ನು ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ, ದಲಿತ ಹಕ್ಕುಗಳ ಸಮಿತಿ ಕರ್ನಾಟಕ ಜಿಲ್ಲಾ ಘಟಕ ಪದಾಧಿಕಾರಿಗಳು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದರು.

ದಲಿತ ಹಕ್ಕುಗಳ ಸಮಿತಿ ಕರ್ನಾಟಕ ಜಿಲ್ಲಾ ಘಟಕ ಪದಾಧಿಕಾರಿಗಳ ಪ್ರತಿಭಟನೆ
ದಲಿತ ಹಕ್ಕುಗಳ ಸಮಿತಿ ಕರ್ನಾಟಕ ಜಿಲ್ಲಾ ಘಟಕ ಪದಾಧಿಕಾರಿಗಳ ಪ್ರತಿಭಟನೆ

By

Published : Aug 28, 2020, 11:41 PM IST

ರಾಯಚೂರು:ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದ ದಲಿತ ಯುವಕ ಅನಿಲ ಇಂಗಳಗಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕ ಜಿಲ್ಲಾ ಘಟಕ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ, ಜಿಲ್ಲಾಧಿಕಾರಿ ಸ್ಥಾನಿಕ ಅವರಿಗೆ ಮನವಿ ಸಲ್ಲಿಸಲಾಯಿತು. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಕಟ್ಟೆಯ ಮೇಲೆ ಮೇಲ್ಜಾತಿಯವರ ಸಮನಾಗಿ ಕುಳಿತುಕೊಂಡಿದ್ದ ಎಂದು ಆರೋಪಿಸಿ ಮೇಲ್ಜಾತಿಯವರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

ಮೃತ ದಲಿತ ಯುವಕನ ಕುಟುಂಬಸ್ಥರಿಗೆ ಉದ್ಯೋಗ ಒದಗಿಸಬೇಕು, ಅದೇ ರೀತಿ ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಕುರಡಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹಲ್ಲೆ ನಡೆಸಿದ ಸವರ್ಣೀಯರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details