ರಾಯಚೂರು:ಮಕ್ಕಳು ಆರೋಗ್ಯದಿಂದ ಇರಬೇಕಾದರೆ ಪಾಲಕರು ತಪ್ಪದೇ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕೆಂದು ಜಿಪಂ ಸಿಇಒ ಲಕ್ಷ್ಮಿಕಾಂತರೆಡ್ಡಿ ತಿಳಿಸಿದರು. ನಗರದ ಕೆಇಬಿ ಸರ್ಕಾರಿ ಪ್ರಾಥಮಿಕ ಹಿರಿಯ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಆರೋಗ್ಯವಂತ ಮಕ್ಕಳಿಗಾಗಿ ಪೋಲಿಯೋ ಲಸಿಕೆ ಹಾಕಿಸಿ.. ಜಿಪಂ ಸಿಇಒ ಲಕ್ಷ್ಮಿಕಾಂತರೆಡ್ಡಿ ಮನವಿ.. - Raichur Z.P. CEO Lakshmikanthareddy
ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಜಿಪಂ ಸಿಇಒ ಲಕ್ಷ್ಮಿಕಾಂತ ರೆಡ್ಡಿ ಚಾಲನೆ ನೀಡಿದರು.
ಪಲ್ಸ್ ಪೋಲಿಯೊ ಅಭಿಯಾನ
ರಾಯಚೂರು ತಾಲೂಕಿನಲ್ಲಿ ಸುಮಾರು ಎರಡೂವರೆ ಲಕ್ಷ ಮಕ್ಕಳಿಗೆ ಇಂದು ಪೋಲಿಯೋ ಹಾಕಲಾಗುತ್ತಿದೆ. ರಾಯಚೂರು ತಾಲೂಕಿನಲ್ಲಿ 2,35 ಮೇಲ್ವಿಚಾರಕರನ್ನು ನೇಮಿಸಲಾಗಿದೆ. 1,000 ಬೂತ್ಗಳು ಹಾಗೂ 3,450 ಪೋಲಿಯೋ ಡ್ರಾಪ್ಗಳಿವೆ ಎಂದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆ, ಸಮುದಾಯದ ಭವನ, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಜನವರಿ 23ರವರೆಗೆ ಪೋಲಿಯೋ ಲಸಿಕೆ ಹಾಕಲಾಗುತ್ತದೆ. ಈ ನಿಟ್ಟಿನಲ್ಲಿ ಪಾಲಕರು ತಪ್ಪದೇ ಮಕ್ಕಳಿಗೆ ಲಸಿಕೆ ಹಾಕಿಸಲು ಮನವಿ ಮಾಡಿದರು.