ರಾಯಚೂರು:ಪ್ರವಾಹ ಭೀತಿ ಎದುರಾದರೆ ಅದನ್ನು ಸಮರ್ಪಕವಾಗಿ ನಿರ್ವಹಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಇದೀಗ ಜಿಲ್ಲೆಯಲ್ಲಿ 24 ಜನರ ಎನ್ಡಿಆರ್ಎಫ್ ತಂಡ ಬೀಡುಬಿಟ್ಟಿದೆ.
ಮಹಾರಾಷ್ಟ್ರ ಹಾಗೂ ಮಲೆನಾಡು ಭಾಗದಲ್ಲಿ ಅತಿಯಾಗಿ ಮಳೆ ಸುರಿಯುತ್ತಿರುವ ಪರಿಣಾಮ ಜಲಾಶಯಗಳು ಭರ್ತಿಯಾಗಿವೆ. ಜಲಾಶಯದ ಹೆಚ್ಚುವರಿ ನೀರನ್ನು ನದಿಗೆ ಹರಿದು ಬಿಡಲಾಗುತ್ತಿದ್ದು, ನದಿ ಪಾತ್ರದಲ್ಲಿನ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.
ಇನ್ನೂ ಜಿಲ್ಲಾಡಳಿತ ಸಹ ಪ್ರವಾಹ ಭೀತಿ ಎದುರಾದಾಗ ಅದನ್ನು ಸಮರ್ಪಕವಾಗಿ ನಿರ್ವಹಿಸಲು ಬೇಕಾದ ಅಗತ್ಯ ಸಿದ್ಧತೆಯನ್ನು ಕೈಗೊಂಡಿದೆ. ಅಲ್ಲದೇ ಇದನ್ನು ಸರ್ಕಾರದ ಗಮನಕ್ಕೆ ತಂದಿದ್ದು, ಇದೀಗ 24 ಸದಸ್ಯರ ಎನ್ಡಿಆರ್ಎಫ್ ತಂಡ ಜಿಲ್ಲೆಯಲ್ಲಿ ಬೀಡುಬಿಟ್ಟಿದೆ.
ಇಂದು ಬೆಳಿಗ್ಗೆ ನಾರಾಯಣಪುರ ಜಲಾಶಯದಿಂದ 30,108 ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ. ಇಂದು ಸಂಜೆ 5 ಗಂಟೆಯವರಗೆ 1.2 ಲಕ್ಷ ಕ್ಯೂಸೆಕ್ ನೀರನ್ನು ಹರಿದು ಬೀಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 3.30ಕ್ಕೆ ಜಲಾಶಯಕ್ಕೆ 40 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 63,400 ಕ್ಯೂಸೆಕ್ ನೀರನ್ನು ನದಿಗೆ ಹರಿದು ಬಿಡಲಾಗುತ್ತಿದೆ. ಇದರಿಂದ ಜಿಲ್ಲೆಗೆ ಪ್ರವಾಹ ಭೀತಿ ಶುರುವಾಗಿದೆ.