ರಾಯಚೂರು: ಜಮೀನಲ್ಲಿ ಎಸೆದು ಹೋಗಿದ್ದ ನವಜಾತ ಹೆಣ್ಣು ಶಿಶುವನ್ನು ಆ್ಯಂಬುಲೆನ್ಸ್ ಸಿಬ್ಬಂದಿ ಆಸ್ಪತ್ರೆಗೆ ಸೇರಿಸಿದ್ದಾರೆ. ಜಿಲ್ಲೆಯ ಮಸ್ಕಿ ತಾಲೂಕಿನ ಹರವಪುರ ಗ್ರಾಮದಲ್ಲಿ ನವಜಾತ ಹೆಣ್ಣು ಮಗುವನ್ನು ಸಂಗಣ್ಣ ಎನ್ನುವವರ ಹೊಲದಲ್ಲಿ ಯಾರೋ ಎಸೆದು ಹೋಗಿದ್ದರು.
ಜಮೀನಿನಲ್ಲಿ ಅನಾಥವಾಗಿ ಬಿದ್ದಿದ್ದ ಹೆಣ್ಣು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ 108 ಆ್ಯಂಬುಲೆನ್ಸ್ ಸಿಬ್ಬಂದಿ! - 108 staff
ಜಮೀನೊಂದರಲ್ಲಿ ಅನಾಥವಾಗಿ ಬಿದ್ದಿದ್ದ ಹೆಣ್ಣು ಮಗುವನ್ನು ಆ್ಯಂಬುಲೆನ್ಸ್ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಣ್ಣು ಮಗು ಎಂಬ ಕಾರಣದಿಂದಾಗಿ ಜಮೀನಿನಲ್ಲಿ ಬಿಟ್ಟು ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಜಮೀನಿನಲ್ಲಿ ಅನಾಥವಾಗಿ ಬಿದಿದ್ದ ಹೆಣ್ಣುಮಗುವನ್ನು ಆಸ್ಪತ್ರೆಗೆ ದಾಖಲಿಸಿದ 108 ಸಿಬ್ಬಂದಿ
ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ 108 ಆ್ಯಂಬುಲೆನ್ಸ್ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಆರೋಗ್ಯ ಕವಚ ಆ್ಯಂಬುಲೆನ್ಸ್ ಚಾಲಕ ಅಮೀರ್ ಪಾಷಾ ಹಾಗೂ ಸಿಬ್ಬಂದಿ ಗಂಗಣ್ಣ ಮಗುವನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಣ್ಣು ಮಗು ಎಂಬ ಕಾರಣದಿಂದಾಗಿ ಜಮೀನಿನಲ್ಲಿ ಬಿಟ್ಟು ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.