ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಸ್ವಾಭಿಮಾನದ ಚುನಾವಣೆಯಾಗಿದ್ದು, ಮತದಾರರು ನನ್ನನ್ನು ಗೆಲ್ಲಿಸಿ ಸ್ವಾಭಿಮಾನ ಉಳಿಸಿಕೊಳ್ಳುವ ಭರವಸೆ ನನಗಿದೆ ಎಂದು ಜೆಡಿಎಸ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ಹೇಳಿದ್ದಾರೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಸ್ವಾಭಿಮಾನದ ಚುನಾವಣೆ: ತಿಮಯ್ಯ ಪುರ್ಲೆ - JDS candidate Of Northeast Teachers' Field is Thimmaiah Purley
ಇಲ್ಲಿಯವರೆಗೂ ಬಹಳಷ್ಟು ಕಡೆಗಳಲ್ಲಿ ಶಿಕ್ಷಕರಲ್ಲದವರೂ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದರಿಂದ ಶಿಕ್ಷಕರು ಮತ್ತು ಪ್ರತಿನಿಧಿಗಳ ನಡುವೆ ಸಮನ್ವಯತೆ ಕೊರತೆ ಇದೆ.ಈ ಹಿನ್ನೆಲೆ ಈ ಬಾರಿಯ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ..
ತಿಮಯ್ಯ ಪುರ್ಲೆ ಹೇಳಿಕೆ
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಶಾನ್ಯ ಶಿಕ್ಷಕರ ವಿಧಾನ ಪರಿಷತ್ ಕ್ಷೇತ್ರದ ಒಂದು ಶಿಕ್ಷಕರ ಕ್ಷೇತ್ರವಾಗಿದೆ. ಇಲ್ಲಿ ಶಿಕ್ಷಕರೆ ಸ್ಷರ್ಧಿಸಬೇಕು ಎನ್ನುವ ಅಭಿಲಾಷೆಯಿಂದ ಜೆಡಿಎಸ್ ಪಕ್ಷದ ವರಿಷ್ಠರು ನನ್ನನ್ನು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ.
ಇಲ್ಲಿಯವರೆಗೂ ಬಹಳಷ್ಟು ಕಡೆಗಳಲ್ಲಿ ಶಿಕ್ಷಕರಲ್ಲದವರೂ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದರಿಂದ ಶಿಕ್ಷಕರು ಮತ್ತು ಪ್ರತಿನಿಧಿಗಳ ನಡುವೆ ಸಮನ್ವಯತೆ ಕೊರತೆ ಇದೆ.ಈ ಹಿನ್ನೆಲೆ ಈ ಬಾರಿಯ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.