ಕರ್ನಾಟಕ

karnataka

ETV Bharat / state

ವಿವಿ ಸ್ಥಾಪನೆಗೆ ವಿಳಂಬ.. ಅಧಿವೇಶನದಲ್ಲಿ ಪ್ರಸ್ತಾಪಿಸ್ತಾರಂತೆ ಕೈ ಎಂಎಲ್‌ಸಿ ಬೋಸರಾಜ್

ರಾಯಚೂರು ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಕ್ಕೆ ವಿಳಂಬವಾಗುತ್ತಿರುವುದನ್ನ ಅಧಿವೇಶನದಲ್ಲಿ ಪ್ರಸ್ತಾವನೆ ಮಾಡುವುದಾಗಿ ವಿಧಾನ ಪರಿಷತ್ ಸದಸ್ಯ ಎನ್ ಎಸ್ ಬೋಸರಾಜ್ ಹೇಳಿದ್ದಾರೆ.

By

Published : Oct 9, 2019, 6:08 PM IST

ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜ್

ರಾಯಚೂರು:ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಕ್ಕೆ ವಿಳಂಬವಾಗುತ್ತಿರುವುದನ್ನ ಅಧಿವೇಶನದಲ್ಲಿ ಪ್ರಸ್ತಾವನೆ ಮಾಡುವುದಾಗಿ ವಿಧಾನಪರಿಷತ್ ಸದಸ್ಯ ಎನ್ ಎಸ್ ಬೋಸರಾಜ್ ಹೇಳಿದ್ದಾರೆ.

ಜಿಲ್ಲೆಯ ಪ್ರತಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ರಾಯಚೂರು, ಯಾದಗಿರಿ, ಎರಡು ಜಿಲ್ಲೆಗಳನ್ನು ಸೇರಿಸಿ ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಇದಾದ ಬಳಿಕ ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲರು ಎರಡು ಬಾರಿ ತಿರಸ್ಕರಿಸಿದ್ದಾರೆ. ಇದರಿಂದಾಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ವಿಳಂಬವಾಗುತ್ತಿದೆ ಎಂದು ತೀವ್ರವಾಗಿ ಖಂಡಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಎನ್ ಎಸ್ ಬೋಸರಾಜ್..

ನಾಳೆಯಿಂದ ಮೂರು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಿ ಮುಂಬರುವ ಶೈಕ್ಷಣಿಕ ವರ್ಷದಿಂದ ರಾಯಚೂರು ವಿವಿ ಸ್ಥಾಪನೆಗೆ ಎಲ್ಲಾ ಪಕ್ಷದ ನಾಯಕರು ಪಕ್ಷಾತೀತವಾಗಿ ಧ್ವನಿ ಎತ್ತುವುದಾಗಿ ಹೇಳಿದ್ರು.

ಒಂದು ವೇಳೆ ಸರ್ಕಾರ ವಿಳಂಬ ಮಾಡಿದ್ರೆ, ಜಿಲ್ಲೆಯಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ. ಈ ವೇಳೆ ಶಾಸಕರಾದ ಬಸವರಾಜ್ ಪಾಟೀಲ್ ಇಟಗಿ, ಬಸವನಗೌಡ ದದ್ದಲ್, ಮಾಜಿ ಸಂಸದ ಬಿ ವಿ ನಾಯಕ, ಮುಖಂಡರಾದ ಜಯಣ್ಣ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ ಹಾಗೂ ಕೆ ಶಾಂತಪ್ಪ ಸೇರಿ ಇತರರಿದ್ದರು.

ABOUT THE AUTHOR

...view details