ರಾಯಚೂರು: ಕೋವಿಡ್ ಕೇರ್ ಸೆಂಟರ್ನ ಸ್ನಾನಗೃಹದಲ್ಲಿ ನೇಣು ಬಿಗಿದುಕೊಂಡು ವೃದ್ಧೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯರಮರಸ್ನಲ್ಲಿ ನಡೆದಿದೆ.
ರಾಯಚೂರು: ಕೋವಿಡ್ ಕೇರ್ ಸೆಂಟರ್ನಲ್ಲಿ ವೃದ್ಧೆ ಆತ್ಮಹತ್ಯೆಗೆ ಶರಣು - ರಾಯಚೂರು ಕೋವಿಡ್ ಕೇರ್ ಸೆಂಟರ್‘
ರಾಯಚೂರಿನ ಯರಮರಸ್ನಲ್ಲಿರುವ ಕೋವಿಡ್ ಕೇರ್ ಸೆಂಟರ್ನ ಸ್ನಾನಗೃಹದಲ್ಲಿ ನೇಣು ಬಿಗಿದುಕೊಂಡು ವೃದ್ಧೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ವೃದ್ಧೆ ಆತ್ಮಹತ್ಯೆಗೆ ಶರಣು
ನಗರದ ನಿವಾಸಿ ಮಾರೆಮ್ಮ(79) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇತ್ತೀಚೆಗೆ ಮಾರೆಮ್ಮ ಆಪ್ತ ಸಂಬಂಧಿಯೊಬ್ಬರು ಸಾವನ್ನಪ್ಪಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಕೇಂದ್ರದಲ್ಲಿ ವೃದ್ಧೆ ಜೊತೆ ಮೊಮ್ಮಗ ಸಹ ಇದ್ದನೆಂದು ತಿಳಿದುಬಂದಿದೆ.
ಸದ್ಯ ರಾಯಚೂರು ಗ್ರಾಮೀಣ ಠಾಣಾ ವ್ಯಾಪಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.