ಕರ್ನಾಟಕ

karnataka

ETV Bharat / state

ವರುಣ ತಂದ ಅವಾಂತರ: ಸಂಕಷ್ಟದಲ್ಲಿ ಈರುಳ್ಳಿ ಬೆಳೆಗಾರ - Onion Price down

ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸತತವಾಗಿ ಜಿಟಿ ಜಿಟಿ ಮಳೆ ಸುರಿದಿತ್ತು. ಇದರ ಪರಿಣಾಮ ಈರುಳ್ಳಿ ಬೆಳೆದ ರೈತನ ಜಮೀನಿನಲ್ಲಿ ನೀರು ನಿಲುಗಡೆಯಾಗಿದೆ. ಇದರಿಂದ ಈರುಳ್ಳಿ ಕೊಳೆತು ಹೋಗುತ್ತಿದೆ. ಅಲ್ಲದೇ ಮಾರುಕಟ್ಟೆಯಲ್ಲಿ ಬೆಲೆಯಿಲ್ಲದೆ ಅನ್ನದಾತ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಸಂಕಷ್ಟಕ್ಕೆ ಸಿಲುಕಿದ ಈರುಳ್ಳಿ ಬೆಳೆಗಾರ
ಸಂಕಷ್ಟಕ್ಕೆ ಸಿಲುಕಿದ ಈರುಳ್ಳಿ ಬೆಳೆಗಾರ

By

Published : Aug 29, 2020, 12:05 AM IST

ರಾಯಚೂರು:ಈರುಳ್ಳಿ ಬೆಳೆದ ಬೆಳೆಗಾರನಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಕಳೆದ ವರ್ಷ ಭಾರೀ ಬೆಲೆಗೆ ಮಾರಾಟವಾಗುತ್ತಿದ್ದ ಈರುಳ್ಳಿ, ಪ್ರಸಕ್ತ ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆ ಸಿಗದೆ ಸಂಕಷ್ಟ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಕಷ್ಟಕ್ಕೆ ಸಿಲುಕಿದ ಈರುಳ್ಳಿ ಬೆಳೆಗಾರ

ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಈರುಳ್ಳಿ ಬೆಳೆಗೆ ಹಾನಿ ಉಂಟು ಮಾಡಿದ್ದು, ಮಾರುಕಟ್ಟೆಯಲ್ಲಿ ಬೆಲೆಯಿಲ್ಲದಂತೆ ಮಾಡಿದೆ. ರಾಯಚೂರು ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ರೈತರು ಈರುಳ್ಳಿ ಮಾರಾಟಕ್ಕೆ ತಂದಿದ್ದು, ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಕೇವಲ 200-600 ರೂಪಾಯಿವರೆಗೆ ಮಾತ್ರ ಮಾರಾಟವಾಗುತ್ತಿದ್ದು, ಈರುಳ್ಳಿ ಬೆಳೆಗೆ ವ್ಯಯ ಮಾಡಿದ ಹಣ ಸಹ ಮರುಪಾವತಿಯಾಗದ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ನಮ್ಮ ನೆರವಿಗೆ ಬರಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸತತವಾಗಿ ಜಿಟಿ ಜಿಟಿ ಮಳೆ ಸುರಿದಿತ್ತು. ಇದರ ಪರಿಣಾಮ ಈರುಳ್ಳಿ ಬೆಳೆದ ರೈತನ ಜಮೀನಿನಲ್ಲಿ ನೀರು ನಿಲುಗಡೆಯಾಗಿವೆ. ಇದರಿಂದ ಈರುಳ್ಳಿ ಕೊಳೆತು ಹೋಗುತ್ತಿವೆ. ಅಲ್ಲದೇ ಮಾರುಕಟ್ಟೆಯಲ್ಲಿ ಬೆಲೆಯಿಲ್ಲದೆ ಅನ್ನದಾತ ಸಂಕಷ್ಟಕ್ಕೆ ಸಿಲುಕಿಸುವಂತೆ ಮಾಡಿದೆ.

ಕಳೆದ ವರ್ಷ ಎಪಿಎಂಸಿಯಲ್ಲಿ ಈರುಳ್ಳಿಗೆ 15 ಸಾವಿರಕ್ಕೂ ಹೆಚ್ಚಿನ ಬೆಲೆಗೆ ಮಾರುಕಟ್ಟೆಯಲ್ಲಿ ಮಾರಾಟವಾಗುವ ಮೂಲಕ ದಾಖಲೆ ನಿರ್ಮಾಣವಾಯಿತು. ಈ ಬಾರಿಯೂ ಈರುಳ್ಳಿಗೆ ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆ ಸಿಗಬಹುದೆಂಬ ನಿರೀಕ್ಷೆಯಲ್ಲಿ ರೈತರು ಭರವಸೆಯನ್ನ ಹೊಂದಿದ್ದರು. ಆದರೆ ಸತತ ಮಳೆ ಹಾಗೂ ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆಯಿಲ್ಲದೆ ಅನ್ನದಾತನಿಗೆ ತತ್ತರಿಸುವಂತೆ ಮಾಡಿದ್ದು, ಸರ್ಕಾರ ಸಂಕಷ್ಟದಲ್ಲಿರುವ ರೈತನ ನೆರವಿಗೆ ಧಾವಿಸಬೇಕು ಎಂದು ಅನ್ನದಾತರು ಒತ್ತಾಯಿಸಿದ್ದಾರೆ.

ABOUT THE AUTHOR

...view details