ರಾಯಚೂರು: ದೇವದುರ್ಗ ಪಟ್ಟಣದ ಐಬಿಯಲ್ಲಿ ನಡೆದಿದೆ ಎನ್ನಲಾದ ಆಪರೇಷನ್ ಕಮಲದ ಆಡಿಯೋ ಪ್ರಕರಣ ಸಂಬಂಧ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರು ಪುತ್ರ ಶರಣಗೌಡ ವಿಚಾರಣೆಗೆ ಹಾಜರಾದರು. ನಗರದ ಡಿವೈಎಸ್ಪಿ ಕಚೇರಿಯಲ್ಲಿ ಅವರ ವಿಚಾರಣೆ ನಡೆಯಿತು.
ವಿಚಾರಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳ ಕೋರ್ಟ್ನಲ್ಲಿ ಸಿಎಂ ವಿರುದ್ಧ ತನಿಖೆ ಮಾಡಬೇಕೆಂದು ಆದೇಶ ಬಂದಿತ್ತು. ಹೀಗಾಗಿ ತನಿಖಾಧಿಕಾರಿಯಾಗಿ ರಾಯಚೂರು ಡಿವೈಎಸ್ಪಿಯವರನ್ನು ನೇಮಕ ಮಾಡಿದ್ದಾರೆ. ಅವರಿಗೆ ನೋಟೀಸ್ ನೀಡಿ ನಮಗೆ ಬರಲು ಹೇಳಿದ್ರು. ನಾವು ಮಾತನಾಡಿರುವ ಆಡಿಯೋ ಹಾಗೂ ನಮ್ಮ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ. ನನಗೆ ನೂರಕ್ಕೆ ನೂರು ನ್ಯಾಯ ಸಿಗಲ್ಲ ಎಂಬ ವಿಶ್ವಾಸವಿದೆ. ಆದ್ರೂ ಪೊಲೀಸ್ ಅಧಿಕಾರಿಗಳ ಮೇಲೆ ನಂಬಿಕೆ ಇದೆ ಎಂದರು.