ರಾಯಚೂರು:ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸೌಲಭ್ಯಗಳನ್ನು ನೇರವಾಗಿ ರೈತರಿಗೆ ತಲುಪಿಸುವ ಉದ್ದೇಶದಿಂದ ಪಹಣಿ ಹಾಗೂ ಆಧಾರ್ ಸಂಖ್ಯೆ ಜೋಡಣೆ ಪ್ರಕ್ರಿಯೆ ನಡೆಯುತ್ತಿದ್ದು, ಜಿಲ್ಲೆಯ 30,90,079 ರೈತರು ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ.
ಕೃಷಿ ಸನ್ಮಾನ್, ಬೆಳೆ ಸಮೀಕ್ಷೆ, ಬೆಂಬಲ ಬೆಲೆ, ಬೆಳೆ ವಿಮೆ, ನರೇಗಾ ಯೋಜನೆಯಲ್ಲಿ ಉದ್ಯೋಗ, ಹಾಲು ಉತ್ಪಾದನೆಗೆ ಸಬ್ಸಿಡಿ ಸೇರಿದಂತೆ ಇತರ ಇಲಾಖೆಯ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಪಹಣಿ ಹಾಗೂ ಆಧಾರ್ ಸಂಖ್ಯೆ ಜೋಡಣೆ ಕಾರ್ಯ ಪ್ರಗತಿಯಲ್ಲಿದ್ದು, ರೈತರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಜಿಲ್ಲೆಯ ಒಟ್ಟು 6,31,207 ರೈತರಲ್ಲಿ 30,90,079 ರೈತರು ತಮ್ಮ ಪಹಣಿ ಹಾಗೂ ಆಧಾರ್ ಸಂಖ್ಯೆ ಜೋಡಿಸುವ ಮೂಲಕ ರಾಜ್ಯದಲ್ಲಿ ಜಿಲ್ಲೆಯನ್ನು 12 ಸ್ಥಾನಕ್ಕೆ ಕೊಂಡೊಯಿದ್ದಿದ್ದು, ಕಳೆದ ಹದಿನೈದು ದಿನಗಳಲ್ಲಿ 26,689 ರೈತರು ನೋಂದಣಿ ಮಾಡಿಕೊಂಡಿದ್ದಾರೆ.