ರಾಯಚೂರು:ಗಣೇಶ ಪ್ರತಿಷ್ಠಾಪನೆ ಕುರಿತು ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದ್ದು ನಗರ ಹಾಗೂ ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡುವ ಗಣೇಶಗಳಿಗೆ 5 ದಿನ ಮಾತ್ರ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೊನಾ ಹಿನ್ನೆಲೆ ಸಾರ್ವಜನಿಕರು ನೈಜ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಸರ್ಕಾರ ಹೇಳಿದ ನಿಯಮ ಪಾಲನೆ ಜೊತೆಗೆ ಶ್ರದ್ಧಾ ಭಕ್ತಿಯಿಂದ ಸಾರ್ವಜನಿಕರು ಹಬ್ಬವನ್ನು ಆಚರಿಸಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದರು.