ಕರ್ನಾಟಕ

karnataka

ETV Bharat / state

ಸಾಮಾಜಿಕ ಅಂತರ ಮರೆತ ಜನ: ಸರ್ಕಾರಿ ಕಚೇರಿಯಲ್ಲಿ ನೂಕು ನುಗ್ಗಲು - ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನ

ಜಿಲ್ಲೆಯಲ್ಲಿ ದಿನ ದಿನಕ್ಕೆ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಿದ್ದರೂ ಜನರು ಯಾವುದೇ ಮುನ್ನೆಚ್ಚರಿಕೆ ಕ್ರಮಗಳನನ್ನು ತೆಗೆದುಕೊಳ್ಳದೇ ಕೊರೊನಾಗೆ ಆಹ್ವಾನ ನೀಡುತ್ತಿದ್ದಾರೆ.

People not followed the social distance
ಸರ್ಕಾರಿ ಕಚೇರಿಯಲ್ಲಿ ನೂಕು ನುಗ್ಗಲು

By

Published : Jul 28, 2020, 6:18 AM IST

ರಾಯಚೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ನಿಯಮವನ್ನ ಕಡ್ಡಾಯವಾಗಿ ಪಾಲಿಸಬೇಕು. ಆದ್ರೆ, ರಾಯಚೂರು ನಗರದ ಹಿರಿಯ ಉಪನೋಂದಣಿ ಕಚೇರಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ನೋಂದಣಿ ಕಾರ್ಯವನ್ನ ನಡೆಸಲಾಗುತ್ತಿದೆ.

ಸರ್ಕಾರಿ ಕಚೇರಿಯಲ್ಲಿ ನೂಕು ನುಗ್ಗಲು

ಜಿಲ್ಲೆಯಲ್ಲಿ ದಿನ ದಿನಕ್ಕೆ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಜನರು ಗುಂಪು ಗುಂಪಾಗಿ ಸೇರದಂತೆ ಎಚ್ಚರವಹಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಅಷ್ಟಾದರೂ ತಮಗೂ ಕೊರೊನಾಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಜನರು ಬೇಜವಾಬ್ದಾರಿ ಮೆರೆಯುತ್ತಿದ್ದಾರೆ.

ಇನ್ನು ಉಪ ನೋಂದಣಿ ಕಚೇರಿಯ ಅಧಿಕಾರಿಗಳೂ ಸಹ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವಿಫಲವಾಗಿದ್ದಾರೆ.

ABOUT THE AUTHOR

...view details