ರಾಯಚೂರು:ರಾಜ್ಯದಲ್ಲಿ ಅತ್ಯಂತ ಹಿಂದುಳಿದಿರುವ ಜಿಲ್ಲೆ ರಾಯಚೂರು. ರಾಜಕೀಯ ಕೇಸರೆರಚಾಟದ ಮಧ್ಯೆ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಇದಕ್ಕೆಲ್ಲ ಕಾರಣ ರಾಜ್ಯ ರಾಜ್ಯ ರಾಜಕೀಯ ಬೆಳವಣಿಗೆಯಿಂದಾಗಿ ಎಂದು ಇಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
2008ರಲ್ಲೂ ರಾಯಚೂರಿನಲ್ಲಿಆಪರೇಷನ್ ನಡೆದಿತ್ತು. ಅದೇ ರೀತಿ ಇದೀಗ ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಮರುಚುನಾವಣೆ ನಡೆಯಲಿದೆ. ಕಾಂಗ್ರೆಸ್ ಶಾಸಕ ಪ್ರತಾಪ್ಗೌಡ ಪಾಟೀಲ್ ಅವರ ರಾಜಕೀಯ ನಡೆಯಿಂದಾಗಿ ಈ ಪರಿಸ್ಥಿತಿ ಬಂದೊದಗಿದೆ.
ಮೈತ್ರಿ ಸರ್ಕಾರವನ್ನು ಪತನಗೊಳಿಸುವ ಉದ್ದೇಶದಿಂದ ಅಸಮಾಧಾನಗೊಂಡಿದ್ದ ಶಾಸಕರನ್ನ ಸೆಳೆದು ಬಿಜೆಪಿ ಸರ್ಕಾರ ರಚಿಸಿದೆ. ಇದರಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಿರುವ ಮಸ್ಕಿ ಕ್ಷೇತ್ರದ ಪ್ರತಾಪ್ ಗೌಡ ಪಾಟೀಲ್ ಸಹ ಗುರುತಿಸಿಕೊಂಡಿದ್ದಾರೆ. ಈ ಕಾರಣಕ್ಕಾಗಿ ರಾಜೀನಾಮೆ ನೀಡಿ, ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವ ಕಾರಣ, ಈ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಸದ್ಯ ಅವರು ಪಕ್ಷದಿಂದ ಅಹರ್ನಗೊಂಡಿದ್ದಾರೆ.
ಅನರ್ಹತೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಶಾಸಕರು ಪಕ್ಷಾಂತರ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನ ಕಗ್ಗೋಲೆ ಮಾಡುತ್ತಿದ್ದಾರೆ ಎಂದು ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರ ಗದ್ದುಗೆ ಗುದ್ದಾಟಕ್ಕೆ ರಾಜಕೀಯ ಚದುರಂಗಾಟದಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತಗೊಳ್ಳುತ್ತಿದೆ. ಶಾಸಕರ ದುರ್ನಡತೆಯಿಂದ ಈಗ ಮತ್ತೆ ಚುನಾವಣೆ ಚುನಾವಣೆ ಎದುರಿಸುವ ಸಂಭವವಿದೆ. ಇದೆಲ್ಲಾ ಆರ್ಥಿಕ ಹೊರೆ. ಅಲ್ಲದೆ, ರಾಜಕೀಯ ಪ್ರಸಹನದಿಂದ ಜಿಲ್ಲೆ ಅಪಖ್ಯಾತಿಗೆ ಗುರಿಯಾಗುತ್ತಿದೆ ಎಂದು ಜನರು ಕಿಡಿಕಾರುತ್ತಿದ್ದಾರೆ.