ರಾಯಚೂರು:ಜಿಲ್ಲೆಯ ಜಂಗಿರಾಂಪೂರ ಗ್ರಾಮ ಪಂಚಾಯತ್ ಚುನಾವಣೆ ಪ್ರಚಾರದಲ್ಲಿ ಭಾಗಿಯಾದ ಆರೋಪದ ಮೇಲೆ ದೈಹಿಕ ಶಿಕ್ಷಕನನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶಿಸಿದ್ದಾರೆ.
ಚುನಾವಣೆ ಪ್ರಚಾರದಲ್ಲಿ ಭಾಗಿಯಾದ ದೈಹಿಕ ಶಿಕ್ಷಕನಿಗೆ ಅಮಾನತು ಶಿಕ್ಷೆ.. - Physical teacher suspension at Lingasuguru
ಗ್ರಾಮ ಪಂಚಾಯತ್ ಚುನಾವಣೆ ಪ್ರಚಾರದಲ್ಲಿ ಭಾಗಿಯಾದ ಆರೋಪದ ಮೇಲೆ ಲಿಂಗಸೂಗೂರು ಗುರುಗುಂಟಾದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕನನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶಿಸಿದ್ದಾರೆ.
![ಚುನಾವಣೆ ಪ್ರಚಾರದಲ್ಲಿ ಭಾಗಿಯಾದ ದೈಹಿಕ ಶಿಕ್ಷಕನಿಗೆ ಅಮಾನತು ಶಿಕ್ಷೆ.. Physical teacher suspension involved in election campaign](https://etvbharatimages.akamaized.net/etvbharat/prod-images/768-512-5692448-thumbnail-3x2-hrs.jpg)
ದೈಹಿಕ ಶಿಕ್ಷಕ ಅಮಾನತು
ಲಿಂಗಸೂಗೂರು ಗುರುಗುಂಟಾದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಲೋಕಪ್ಪ ಅಮಾನತುಗೊಂಡಿರುವ ದೈಹಿಕ ಶಿಕ್ಷಕ.2019ನ.12ರಂದು ಜಂಗಿರಾಂಪೂರದ ಗ್ರಾಪಂ ಚುನಾವಣೆ ವೇಳೆ ಬಹಿರಂಗವಾಗಿ ಪ್ರಚಾರದಲ್ಲಿ ಭಾಗವಹಿಸಿರುವುದು ಹಾಗೂ ವಾಟ್ಸ್ಆ್ಯಪ್ನಲ್ಲಿ ರಾಜಕೀಯ ವ್ಯಕ್ತಿಗಳ ಫೋಟೋ ಹಂಚಿಕೊಂಡಿರುವ ದೂರು ಹಾಗೂ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಧಾರದ ಮೇಲೆ ಲಿಂಗಸೂಗೂರು ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.
TAGGED:
ಲಿಂಗಸುಗೂರು ಶಿಕ್ಷಕ ಅಮಾನತು