ರಾಯಚೂರು: ಜಲ ಜೀವನ್ ಮೀಷನ್ (ಜೆಎಂಎಂ) ಕಾಮಗಾರಿಗಾಗಿ ತಂದು ಹಾಕಿದ್ದ ಪೈಪ್ಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ರಾಯಚೂರಿನ ದೇವಸೂಗೂರು ಗ್ರಾಮದಲ್ಲಿ ಬುಧವಾರ ಜರುಗಿದೆ. ಅವಘಡದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಪರಿಸ್ಥಿತಿ ಹತೋಟಿಗೆ ತಂದರು.
ಜಿಲ್ಲೆಯ ಮನೆ ಮನೆಗೆ ನೀರು ಪೂರೈಕೆ ಮಾಡಲು ಜೆಎಂಎಂ ಕಾಮಗಾರಿ ನಡೆಯುತ್ತಿದೆ. ದೇವಸೂಗೂರು ಗ್ರಾಮ ಪಂಚಾಯತಿ ಕಚೇರಿಯ ಹತ್ತಿರದ ಹಿಂಬದಿಯ ಖಾಲಿ ಜಾಗದಲ್ಲಿ ಪೈಪ್‌ಗಳನ್ನು ಗುತ್ತಿಗೆದಾರರು ತಂದು ಹಾಕಿದ್ದರು. ಬುಧವಾರ ಸಂಜೆ ಬೆಂಕಿ ಕಾಣಿಸಿಕೊಂಡು ಭಾರಿ ಪ್ರಮಾಣದಲ್ಲಿ ಪೈಪ್ ನಾಶವಾಗಿದೆ ಎಂದು ದೇವಸೂಗೂರು ಗ್ರಾ.ಪಂ.ಪಿಡಿಒ ದೂರವಾಣಿ ಮೂಲಕ ತಿಳಿಸಿದರು.
ಇದನ್ನೂ ಓದಿ :ಅತ್ತಿಬೆಲೆ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಬೆಂಕಿ ಅವಘಡ: ಮೃತರ ಸಂಖ್ಯೆ 12ಕ್ಕೆ ಏರಿಕೆ