ರಾಯಚೂರು :ಶಕ್ತಿನಗರ ಹಾಗೂ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಬಂಧನ : ಚಿನ್ನಾಭರಣ ವಶ - Raichur crime latest news
ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Police arrested house theft
ನಜೀರ್ ಅಹ್ಮದ್ ಸಾಬ್ ಬಂಧಿತ ಆರೋಪಿ. ಈತನ ಮೇಲೆ ನಾಲ್ಕು ಕಳ್ಳತನ ಪ್ರಕರಣಳಿದ್ದು, ಈತನಿಂದ 95 ಗ್ರಾಂ ಬಂಗಾರದ ಆಭರಣಗಳು ಮತ್ತು 200 ಗ್ರಾಂ ಬೆಳ್ಳಿ ಆಭರಣಗಳು ಸೇರಿ ಒಟ್ಟು 3,03,300 ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಅವರ ಮಾರ್ಗದರ್ಶನದಲ್ಲಿ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ನೇತೃತ್ವದಲ್ಲಿ ರಚಿಸಲಾದ ತಂಡದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.