ರಾಯಚೂರು: ಕೊರೊನಾ ಸೋಂಕಿನ ನಿಗ್ರಹಕ್ಕೆ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಸಂಪೂರ್ಣವಾಗಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ.
ಲಾಕ್‌ಡೌನ್ ನಡುವೆ ಅನಾವಶ್ಯಕ ಓಡಾಟ: ಹಲವರನ್ನು ವಶಕ್ಕೆ ಪಡೆದ ಪೊಲೀಸರು - ಜನರನ್ನು ವಶಕ್ಕೆ ಪಡೆದ ಪೊಲೀಸರು
ಮೂರು ದಿನಗಳ ಕಾಲ ಕಠಿಣ ಲಾಕ್‌ಡೌನ್ ಜಾರಿಮಾಡಿದ್ರೂ ಸಹ ರಾಯಚೂರು ನಗರದಲ್ಲಿ ಸುಖಾಸುಮ್ಮನೆ ಓಡಾಡುತ್ತಿದ್ದ ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
police
ಆದರೂ ನಿಯಮ ಮೀರಿ ನಗರದಲ್ಲಿ ಅನವಶ್ಯಕವಾಗಿ ಓಡಾಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಚ್ಚುವರಿ ಎಸ್ಪಿ ಹರಿಬಾಬು ನೇತೃತ್ವದಲ್ಲಿ ನಗರದ ಸ್ಟೇಷನ್ ರಸ್ತೆ, ಮಾರುಕಟ್ಟೆ, ಅಂಬೇಡ್ಕರ್ ಸರ್ಕಲ್ ಸೇರಿದಂತೆ ನಾನಾ ಕಡೆಗಳಲ್ಲಿ ಓಡಾಡುತ್ತಿರುವವರನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಯಾವುದೇ ಎಮೆರ್ಜೆನ್ಸಿ ಕಾರಣ ಇಲ್ಲದೇ ಅನವಶ್ಯಕವಾಗಿ ಓಡಾಟ ಮಾಡುತ್ತಿರುವುದು ತಿಳಿದು ಬಂದಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ನಗರದಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.