ರಾಯಚೂರು: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ ತೆರಳುವಾಗ ಬಸ್ ತಡೆದು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲಾಗಿದೆ. ಸುಮಾರು ೫೦ ಜನ ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರಾಯಚೂರಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ತೆರಳುವಾಗ ಪ್ರತಿಭಟಿಸಿದ್ದವರ ಮೇಲೆ ಬಿತ್ತು ಕೇಸ್ - ಪ್ರತಿಭಟನೆ
ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ ತೆರಳುವಾಗ ಬಸ್ ತಡೆದು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲಾಗಿದೆ. ಸುಮಾರು ೫೦ ಜನ ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಯರಮರಸ್ ಸರ್ಕ್ಯೂಟ್ ಹೌಸ್‌ನಿಂದ ಕರೇಗುಡ್ಡ ಗ್ರಾಮಕ್ಕೆ ತೆರಳುವ ವೇಳೆ ಸಾರಿಗೆ ಬಸ್ ತಡೆದು ಗುತ್ತಿಗೆ ಕಾರ್ಮಿಕರು ನ್ಯಾಯ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆ ವೇಳೆ ನೂಕುನುಗ್ಗಲು ಉಂಟಾಗಿತ್ತು. ಆ ವೇಳೆ, ಸಿಎಂ ಕುಮಾರಸ್ವಾಮಿ ಪ್ರತಿಭಟನಾನಿರತರ ಮೇಲೆ ಗರಂ ಆಗಿದ್ರು.
ಈ ನಿಟ್ಟಿನಲ್ಲಿ, ನಿಯಮ ಉಲ್ಲಂಘಿಸಿ ಪ್ರತಿಭಟಿನೆ ನಡೆಸಿದ್ದಾರೆ ಎಂದು ಟಿಯುಸಿಐ ಸಂಘಟನೆ ಮುಖಂಡರ ವಿರುದ್ಧ ದೂರು ದಾಖಲಿಸಲಾಗಿದೆ. ೫೦ ಜನರ ಮೇಲೆ ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನು, ಪೊಲೀಸ್ ಇಲಾಖೆಯ ಈ ನಡೆಯನ್ನು ಟಿಯುಸಿಐ ಸಂಘಟನೆ ಮುಂಖಡರು ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.