ರಾಯಚೂರು: ನಗರದಲ್ಲಿ ಇಂದು ಬೆಳಗ್ಗೆ ಪಿಎಫ್‌ಐನ ಮಾಜಿ ಜಿಲ್ಲಾಧ್ಯಕ್ಷ ಮಹಮ್ಮದ್ ಇಸ್ಮಾಯಿಲ್ ಹಾಗೂ ಮಾಜಿ ಕಾರ್ಯದರ್ಶಿ ಆಸೀಂ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದು, ತಹಶಿಲ್ದಾರ್ ಮುಂದೆ ಹಾಜರುಪಡಿಸಿ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಇಬ್ಬರನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ವಶಕ್ಕೆ ಪಡೆದಿರುವವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದರು.