ರಾಯಚೂರು: ಕಾಲಿಗೆ ತೀವ್ರವಾಗಿ ಗಾಯಗೊಂಡು ನರಳಾಡ್ತಿದ್ದ ಮಾನಸಿಕ ಅಸ್ವಸ್ಥೆಯನ್ನ ಆಸ್ಪತ್ರೆಗೆ ಸೇರಿಸುವ ಮೂಲಕ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
ರಾಯಚೂರು: ಮಾನಸಿಕ ಅಸ್ವಸ್ಥೆಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಪೊಲೀಸರು!
ಕಾಲಿಗೆ ತೀವ್ರವಾಗಿ ಗಾಯಗೊಂಡು ನರಳಾಡುತ್ತಿದ್ದ ಮಾನಸಿಕ ಅಸ್ವಸ್ಥೆಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವು ಮೂಲಕ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
ಮಾನಸಿಕ ಅಸ್ವಸ್ಥೆ
ನಗರದ ಬಟ್ಟೆ ಬಜಾರ್ ಅಂಗಡಿಯೊಂದರ ಮುಂದೆ ಕಾಲಿಗೆ ಗಾಯಗೊಂಡು ಕುಳಿತಿದ್ದ ಮಾನಸಿಕ ಅಸ್ವಸ್ಥ ಮಹಿಳೆ ನರಳುತ್ತಿದ್ದಳು. ಇದನ್ನ ಕಂಡ ಸದರ್ ಬಜಾರ್ ಠಾಣೆಯ ಪಿಎಸ್‌ಐ ಮಂಜುನಾಥ ಹಾಗೂ ಸಿಬ್ಬಂದಿ ಆಟೋ ಮೂಲಕ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಿದ್ದಾರೆ.
ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಭಾನುವಾರ ಲಾಕ್‌ಡೌನ್ ಜಾರಿ ಮಾಡಿದ್ದು, ಇದರ ಕರ್ತವ್ಯದಲ್ಲಿ ಬ್ಯುಜಿಯಾಗಿದ್ದರೂ ಕೂಡಾ ಪೊಲೀಸರು ಗಾಯಗೊಂಡ ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.