ಕರ್ನಾಟಕ

karnataka

ETV Bharat / state

ವಿಡಿಯೋ ವೈರಲ್​​... ರಸ್ತೆಯಲ್ಲಿ ಹಣ ವಸೂಲಿ ಮಾಡ್ತಿದ್ದ ಪೊಲೀಸರ ಅಮಾನತು

ರಾಯಚೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಚಾಲಕರೊಬ್ಬರಿಂದ ಪೊಲೀಸರು ಹಣ ಪಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಈಗ ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹಣ ವಸೂಲಿ ಮಾಡಿದ ಪೊಲೀಸರನ್ನು ಅಮಾನತು ಮಾಡಿದ್ದಾರೆ.

police-suspension-of-money-laundering

By

Published : Sep 8, 2019, 10:09 PM IST

ರಾಯಚೂರು:ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಚಾಲಕರೊಬ್ಬರಿಂದ ಪೊಲೀಸರು ಹಣ ಪಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಈಗ ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹಣ ವಸೂಲಿ ಮಾಡಿದ ಪೊಲೀಸರನ್ನು ಅಮಾನತು ಮಾಡಿದ್ದಾರೆ.

ಈ ವಿಡಿಯೋದಲ್ಲಿ ಗಸ್ತು ತಿರುಗುತ್ತಿದ್ದವರು ಮಾನ್ವಿ ಪೊಲೀಸ್​ ಠಾಣಾ ಪೊಲೀಸರು ಎನ್ನಲಾಗಿದೆ. ಸಾರ್ವಜನಿಕರಿಂದ ಹಣ ಪೀಕುತ್ತಿದ್ದ ಪೊಲೀಸರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಅಲ್ಲದೆ, ಈ ಕೃತ್ಯದಲ್ಲಿ ಪಾಲುದಾರರಾಗಿದ್ದ ಹೋಮ್​ಗಾರ್ಡ್​​ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ರಕ್ಷಕ ದಳದ ಕಮಾಂಡೆಂಟ್​ಗೆ ವರದಿ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಣ ಪಡೆಯುತ್ತಿರುವ ದೃಶ್ಯ

ವಿಡಿಯೋದಲ್ಲಿ ಏನಿದೆ?ಗಸ್ತು ತಿರುಗುವ ವಾಹನ ಹಿಂಭಾಗ ಹೋಮ್​ಗಾರ್ಡ್​ವೊಬ್ಬ ವ್ಯಕ್ತಿಯಿಂದ ಹಣ ವಸೂಲಿ ಮಾಡಿದ್ದಾನೆ. ಆಗ ಕಾರಿನಲ್ಲಿ ಕುಳಿತಿದ್ದ ಮತ್ತೊಬ್ಬ ವ್ಯಕ್ತಿ ಆ ಕೃತ್ಯವನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿದ್ದಾನೆ. ಹೋಮ್​​ಗಾರ್ಡ್ ತನ್ನ ಮೇಲಾಧಿಕಾರಿಯ ಸೂಚನೆಯ ಮೇರೆಗೆ ಹಣ ಪಡೆದುಕೊಂಡು ಜೇಬಿಗೆ ಹಾಕಿಕೊಂಡು, ವ್ಯಕ್ತಿಯನ್ನು ಬಿಟ್ಟು ಕಳಿಸಿದ್ದಾನೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ಪೊಲೀಸ್​ ಇಲಾಖೆಯನ್ನ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.

ABOUT THE AUTHOR

...view details