ರಾಯಚೂರು: ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅನೇಕ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಲಾಕ್ಡೌನ್ ಜಾರಿ ಇರುವ ಸಮಯದಲ್ಲಿ ಜಿಲ್ಲೆಯಲ್ಲಿ ಅನವಶ್ಯಕವಾಗಿ ಓಡಾಡುವ ವಾಹನ ಸವಾರರಿಗೆ ದಂಡ ವಿಧಿಸಿಸುವ ಮೂಲಕ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಾಯಚೂರು ನಗರ ಮತ್ತು ಸಿಂಧನೂರು ನಗರವನ್ನು ಸಂಪೂರ್ಣ ಲಾಕ್ಡೌನ್ ಮಾಡಲಾಗಿದ್ದು, ಉಳಿದ ಪ್ರದೇಶದಲ್ಲಿ ಮಧ್ಯಾಹ್ನದವರೆಗೆ ವ್ಯಾಪಾರ ವಹಿವಾಟಿಗೆ ಅನುಮತಿ ನೀಡಲಾಗಿದೆ. ಅಲ್ಲದೆ ಅನವಶ್ಯಕವಾಗಿ ಓಡಾಡದಂತೆ ಎಚ್ಚರಿಕೆ ನೀಡಲಾಗಿದೆ. ಆದ್ರೂ ಸಹ ರಾಯಚೂರು, ಮಾನ್ವಿ, ಸಿಂಧನೂರು, ಮಸ್ಕಿ, ಸಿರವಾರ, ದೇವದುರ್ಗ, ಲಿಂಗಸೂಗೂರು ತಾಲೂಕು, ನಗರಗಳಲ್ಲಿ ಬೈಕ್, ಕಾರು, ಆಟೋಗಳು ಸೇರಿದಂತೆ ಅನೇಕ ವಾಹನಗಳು ಅನವಶ್ಯಕವಾಗಿ ಓಡಾಡುತ್ತಿವೆ.