ಕರ್ನಾಟಕ

karnataka

ETV Bharat / state

ರಾಯಚೂರು: ಕ್ವಾರಂಟೈನಿಗಳ ಊಟದಲ್ಲಿ ಹುಳು ಪತ್ತೆ... ಫೋಟೋ ವೈರಲ್​ - ಕ್ವಾರಂಟೈನಿಗಳಿಗೆ ಕಳಪೆ ಗುಣಮಟ್ಟದ ಆಹಾರ ವಿತರಣೆ ಆರೋಪ

ವಲಸೆ ಹೋಗಿ ರಾಯಚೂರು ಜಿಲ್ಲೆಗೆ ಮರಳಿದ ಕಾರ್ಮಿಕರು ಮತ್ತು ಹಲವು ಶಂಕಿತರನ್ನು ದೇವದುರ್ಗ ಪಟ್ಟಣದ ಡಿಗ್ರಿ ಕಾಲೇಜಿನಲ್ಲಿ ಕ್ವಾರಂಟೈನ್​ನಲ್ಲಿ ಇರಿಸಲಾಗಿದ್ದು ಇವರಿಗೆ ಕಳಪೆ ಗುಣಮಟ್ಟದ ಆಹಾರ ವಿತರಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

Poor quality food delivery to quarantines
ಕಳಪೆ ಗುಣಮಟ್ಟದ ಆಹಾರ ವಿತರಣೆ

By

Published : May 27, 2020, 12:06 PM IST

ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದ ಹಿನ್ನೆಲೆ ಅನೇಕರನ್ನು ದೇವದುರ್ಗ ಪಟ್ಟಣದ ಡಿಗ್ರಿ ಕಾಲೇಜಿನಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಕ್ವಾರಂಟೈನಿಗಳಿಗೆ ಕಳಪೆ ಗುಣಮಟ್ಟದ ಆಹಾರ ವಿತರಣೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

ಕಳಪೆ ಗುಣಮಟ್ಟದ ಆಹಾರ ವಿತರಣೆ

ವಲಸೆ ಹೋಗಿ ಜಿಲ್ಲೆಗೆ ಮರಳಿದ ಕಾರ್ಮಿಕರು ಮತ್ತು ಹಲವು ಜನರನ್ನು ದೇವದುರ್ಗ ಪಟ್ಟಣದ ಡಿಗ್ರಿ ಕಾಲೇಜಿನಲ್ಲಿ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ. ಈ ಕೇಂದ್ರದಲ್ಲಿರುವವರಿಗೆ ಕಳಪೆ ಆಹಾರ ವಿತರಣೆ ಮಾಡಲಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಗಮನಕ್ಕೆ ತಂದರೂ ಸಹ ಕ್ಯಾರೆ ಎನ್ನುತ್ತಿಲ್ಲ ಎಂದು ಕ್ವಾರಂಟೈನಿಗಳು ಆರೋಪಿಸುತ್ತಿದ್ದಾರೆ. ಜೊತೆಗೆ ಊಟದಲ್ಲಿ ಹುಳಗಳು ಪತ್ತೆಯಾಗಿದ್ದು, ಈ ಕುರಿತಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ABOUT THE AUTHOR

...view details