ರಾಯಚೂರು:ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳಪೆ ಗುಣಮಟ್ಟದ ಪಿಪಿಇ ಕಿಟ್ ಬಂದಿರಲು ಸಾಧ್ಯವಿಲ್ಲ. ಒಂದು ವೇಳೆ ಆ ರೀತಿ ಬಂದಿದ್ದರೆ ತುಂಬಾ ಜನಕ್ಕೆ ಪಾಸಿಟಿವ್ ಬರುತ್ತಿತ್ತು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದರು.
ವಿಕ್ಟೋರಿಯಾ ಆಸ್ಪತ್ರೆಗೆ ಕಳಪೆ ಗುಣಮಟ್ಟದ ಪಿಪಿಇ ಕಿಟ್ ಬಂದಿರಲು ಸಾಧ್ಯವಿಲ್ಲ: ಸಚಿವ ಸುಧಾಕರ್ - Victoria Hospital
ಆರಂಭದಲ್ಲಿ ಸಬ್ ಸ್ಟ್ಯಾಂಡರ್ಡ್ ಕಿಟ್ಗಳು ಪೂರೈಕೆಯಾಗಿದ್ದವು. ಕೇಂದ್ರ ಸರ್ಕಾರದಿಂದ ಅವು ಬಂದಿದ್ದವು. ಬಳಿಕ ಅವರೇ ಹಿಂತೆಗೆದುಕೊಂಡಿದ್ದಾರೆ. ಆದರೆ ಈಗ ಅಂತಹ ಕಿಟ್ಗಳು ಬಂದಿರಲು ಸಾಧ್ಯವಿಲ್ಲ ಎಂದು ಸಚಿವ ಡಾ. ಕೆ.ಸುಧಾಕರ್ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣದ ಕುರಿತು ಮುನ್ನಚ್ಚರಿಕೆ ಸಭೆ ಆಯೊಜಿಸಲಾಗಿತ್ತು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಸಬ್ ಸ್ಟ್ಯಾಂಡರ್ಡ್ ಕಿಟ್ಗಳು ಪೂರೈಕೆಯಾಗಿದ್ದವು. ಕೇಂದ್ರ ಸರ್ಕಾರದಿಂದ ಅವು ಬಂದಿದ್ದವು. ಬಳಿಕ ಅವರೇ ಹಿಂತೆಗೆದುಕೊಂಡಿದ್ದಾರೆ. ಆದರೆ ಈಗ ಅಂತಹ ಕಿಟ್ಗಳು ಬಂದಿರಲು ಸಾಧ್ಯವಿಲ್ಲ ಎಂದರು.
ರಾಯಚೂರಿನಲ್ಲಿ 8 ಮಂದಿ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಸಿಬ್ಬಂದಿಗೆ ಏಕೆ ಸುರಕ್ಷತೆ ಇಲ್ಲ? ನನಗೆ ಸರಿಯಾದ ಮಾಹಿತಿ ಬೇಕು. ಆಸ್ಪತ್ರೆಯಲ್ಲಿ ಸರಿಯಾದ ಮುನ್ನೆಚರಿಕೆ ಕ್ರಮ ಕೈಗೊಂಡಿಲ್ಲವೇ? ಮೂರು ದಿನಗಳಲ್ಲಿ ಈ ಕುರಿತ ಮಾಹಿತಿ ನೀಡಬೇಕು. ರಾಜ್ಯದ ಯಾವ ಜಿಲ್ಲೆಯಲ್ಲೂ ಇಷ್ಟೊಂದು ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿಲ್ಲ. ಹೀಗಾಗಿ ಈ ಬಗ್ಗೆ ವರದಿ ನೀಡಲು ರಿಮ್ಸ್ ನಿರ್ದೇಶಕ ಡಾ. ಬಸವರಾಜ್ ಪೀರಾಪುರೆಗೆ ಸೂಚಿಸಿದ್ರು. ಕೋವಿಡ್-19 ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.