ರಾಯಚೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ 17 ಜನರೂ ಒಗ್ಗಟ್ಟಾಗಿದ್ದೇವೆ ಎಂದು ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ 17 ಜನ್ರೂ ಕೂಡ ಒಗ್ಗಟ್ಟಾಗಿದ್ದೇವೆ: ಪ್ರತಾಪ್ ಗೌಡ ಪಾಟೀಲ್ - ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ 17 ಜನ್ರು ಕೂಡ ಒಗ್ಗಟ್ಟಾಗಿದ್ದೇವೆ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ 17 ಜನರೂ ಕೂಡ ಒಗ್ಗಟ್ಟಾಗಿದ್ದೇವೆ ಎಂದು ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದ್ದಾರೆ.
ರಾಯಚೂರಿನ ಮಸ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಸೋತವರಿಗೆ ಸಚಿವ ಸ್ಥಾನವಿಲ್ಲವೆಂದು ಬಿಜೆಪಿ ಹೈಕಮಾಂಡ್ ಹೇಳಿದ್ದಾರಂತೆ. ಆದ್ರೆ, ನಾವು 17 ಜನರೂ ಕೂಡ ಒಗ್ಗಟ್ಟಾಗಿದ್ದೇವೆ. ಹಾಗಾಗಿ ಎಲ್ಲರಿಗೂ ಸ್ಥಾನ ನೀಡಬೇಕು ಎನ್ನುವ ಒತ್ತಾಯವಿದೆ. ಸೋತ ಇಬ್ಬರಿಗೆ ಅನ್ಯಾಯವಾಗಿದ್ದು, ಅದನ್ನು ಸರಿಪಡಿಸುವ ಭರವಸೆಯಿದೆ. ಆದ್ರೆ, ಸೋತವರಿಗೆ ಸ್ಥಾನವಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ರಾಜ್ಯ ನಾಯಕರು ಹೈಕಮಾಂಡ್ ಜೊತೆ ಮಾತುಕತೆ ನಡೆಸಿ ಸರಿಪಡಿಸುವ ಭರವಸೆಯಿದೆ ಎಂದರು.
ಈಗಾಗಲೇ ಒಂದು ಬಾರಿ ಪಕ್ಷದ ವಿರುದ್ಧ ಬಂಡಾಯವೆದ್ದು, ಪಕ್ಷವನ್ನು ಬಿಟ್ಟು ಬಂದಿದ್ದೇವೆ. ಮತ್ತೊಮ್ಮೆ ಬಂಡಾಯದ ವಿಚಾರವಿಲ್ಲ. ಆದ್ರೆ, 17 ಜನರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂಬುವುದು ನಮ್ಮ ಒತ್ತಾಯ. ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಜಯ ಸಾಧಿಸಿದ 11 ಜನರೂ ಸಹ ಸಚಿವರಾಗಲಿದ್ದಾರೆ. ಆರ್. ಆರ್. ನಗರ ಹಾಗೂ ಮಸ್ಕಿ ಕ್ಷೇತ್ರದ ಚುನಾವಣೆಯಲ್ಲಿ ಗೆದ್ದ ಬಳಿಕ ಸಚಿವ ಸ್ಥಾನ ನೀಡುವ ಭರವಸೆ ಸಿಎಂ ಮೇಲಿದೆ. ಈ ಎರಡೂ ಸಚಿವ ಸ್ಥಾನವನ್ನು ಖಾಲಿ ಇಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.