ಕರ್ನಾಟಕ

karnataka

ETV Bharat / state

ಗಂಗಾಮತಸ್ಥರ ಸೇವಾ ಸಂಘದಿಂದ‌ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ - ಅಭಿವೃದ್ಧಿ ನಿಗಮ ಮಂಡಳಿಯ ಮಾಜಿ ಅಧ್ಯಕ್ಷ ಕೆ.ಶಾಂತಪ್ಪ

ಜಿಲ್ಲಾ ಗಂಗಾಮತಸ್ಥರ ಸಮಾಜ ಸೇವಾ ಸಂಘದಿಂದ‌ ಇಂದು ನಗರದ ವೀರಶೈವ ಕಲ್ಯಾಣ‌ಮಂಟಪದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ ಹಾಗೂ ಪದವಿಯಲ್ಲಿ‌ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗಂಗಾಮತಸ್ಥರ ಸೇವಾ ಸಂಘದಿಂದ‌ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

By

Published : Nov 3, 2019, 6:03 PM IST

ರಾಯಚೂರು:ಜಿಲ್ಲಾ ಗಂಗಾಮತಸ್ಥರ ಸಮಾಜ ಸೇವಾ ಸಂಘದಿಂದ‌ ಇಂದು ನಗರದ ವೀರಶೈವ ಕಲ್ಯಾಣ‌ಮಂಟಪದಲ್ಲಿ ಎಸ್ಎಸ್ಎಲ್ ಸಿ, ಪಿಯುಸಿ ಹಾಗೂ ಪದವಿಯಲ್ಲಿ‌ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗಂಗಾಮತಸ್ಥರ ಸೇವಾ ಸಂಘದಿಂದ‌ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಸಮಾಜದ ಜಿಲ್ಲಾಧ್ಯಕ್ಷ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಂಡಳಿಯ ಮಾಜಿ ಅಧ್ಯಕ್ಷ ಕೆ.ಶಾಂತಪ್ಪ ಮಾತನಾಡಿ, ಶತಶತಮಾನಗಳಿಂದ ಹಿಂದುಳಿದ ಸಮಾಜವಾದ ಗಂಗಾಮತಸ್ಥ ಸಮಾಜ ಅಭಿವೃದ್ಧಿಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ಸಮಾಜದ ಮುಖಂಡರು ರಾಜಕೀಯ, ಶೈಕ್ಷಣಿಕ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಮುಂದೆ ಬರುತ್ತಿದ್ದಾರೆ. ಸಮುದಾಯದವರು ಸರ್ವಧರ್ಮ ಸಹಿಷ್ಣುತೆ ಗುಣ ಅಳವಡಿಸಿಕೊಳ್ಳಬೇಕು. ಬುದ್ದ, ಬಸವಣ್ಣ, ಅಂಬೇಡ್ಕರ್ ಅವರ ವಿಚಾರಧಾರೆಯಿಂದ ಸಮಾಜ ಸುಧಾರಣೆಗೆ ಮುಂದಾಗಬೇಕು ಎಂದು ಹೇಳಿದ್ರು.

ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿದ ಜಿ.ಪಂ.ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಸಮಾಜದ ಅಭಿವೃದ್ದಿಯಾಗಬೇಕಾದ್ರೆ ಶಿಕ್ಷಣ ಬಹಳ ಮುಖ್ಯ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉನ್ನತ ಸ್ಥಾನವನ್ನು ಪಡೆಯಲು ಸಹಕರಿಸಬೇಕು ಎಂದು ಕಿವಿಮಾತು ಹೇಳಿದ್ರು.

ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗಳನ್ನು ಸನ್ಮಾನಿಸಿ ಪ್ರಶಸ್ತಿ ಫಲಕ ನೀಡಲಾಯಿತು.

ABOUT THE AUTHOR

...view details