ಕರ್ನಾಟಕ

karnataka

ETV Bharat / state

ಪ್ರೊಬೇಷನರಿ ಹುದ್ದೆಗಳಿಗೆ ಆಯ್ಕೆಯಾಗಲು ಕಠಿಣ ಪರಿಶ್ರಮ ಬೇಕು: ಡಿಸಿ ವೆಂಕಟೇಶ್​ ಕುಮಾರ್ - raichuru today news

ಕರ್ನಾಟಕ ಲೋಕ ಸೇವಾ ಆಯೋಗದ ಪರೀಕ್ಷೆಗಳನ್ನು ಎದುರಿಸಲು ಸರಿಯಾದ ಕ್ರಮದ ಪೂರ್ವ ತಯಾರಿ ಅವಶ್ಯಕ. ಅಭ್ಯರ್ಥಿಗಳು ಪರಿಶ್ರಮ ವಹಿಸಿ ಅಧ್ಯಯನ ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್​.ವೆಂಕಟೇಶ್​ ಕುಮಾರ್ ಸಲಹೆ ನೀಡಿದ್ದಾರೆ.

preparation-for-probationary-posts-is-required
ಜಿಲ್ಲಾಧಿಕಾರಿ ಆರ್​.ವೆಂಕಟೇಶ್​ ಕುಮಾರ್

By

Published : Aug 20, 2020, 5:29 PM IST

ರಾಯಚೂರು:ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳಿಗೆ ಹೆಚ್ಚಿನ ಓದು, ಸಮಯ ಪ್ರಜ್ಞೆ, ಪರಿಶ್ರಮ ಹಾಗೂ ಪೂರ್ವ ತಯಾರಿ ತುಂಬಾ ಅಗತ್ಯ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಆರ್​.ವೆಂಕಟೇಶ್​ ಕುಮಾರ್

ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಲೋಕಸೇವಾ ಆಯೋಗವು 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ತರಬೇತಿ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದ ಅವರು, ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳು ಆಡಳಿತ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಹುದ್ದೆಗಳಾಗಿವೆ.

ಕೊರೊನಾ ಸಂದರ್ಭದಲ್ಲಿಯೂ ರಾಜ್ಯದಲ್ಲಿ ನಡೆಸಲಾದ ಎಲ್ಲ ಪರೀಕ್ಷೆಗಳು ಯಶಸ್ವಿಯಾಗಿದ್ದು, ಇತರ ರಾಜ್ಯಗಳಿಗೆ ಮಾದರಿಯಾಗಿದೆ. ಈ ನಿಟ್ಟಿನಲ್ಲಿ ನಮ್ಮೆಲ್ಲಾ ಅಧಿಕಾರಿಗಳ ಶ್ರಮ ಶ್ಲಾಘನೀಯ. ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್​ ಸ್ಕ್ರೀನಿಂಗ್, ಸ್ಯಾನಿಟೈಸರ್‌‌, ಮಾಸ್ಕ್ ಬಳಕೆ ಕಡ್ಡಾಯವಾಗಿದ್ದು, ಸಾಮಾಜಿಕ ಅಂತರ ಪಾಲನೆಗೆ ಒತ್ತು ನೀಡಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ದುರುಗೇಶ, ಜಿಲ್ಲಾ ಆರೋಗ್ಯ ಅಧಿಕಾರಿ ರಾಮಕೃಷ್ಣ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಹೆಚ್. ಗೋನಾಳ ಸೇರಿದಂತೆ ಕಾರ್ಯಾಗಾರದಲ್ಲಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

ABOUT THE AUTHOR

...view details