ರಾಯಚೂರು:ಕೊರೊನಾ ಸಂದರ್ಭದಲ್ಲಿ ಖಾಸಗಿ ಶಾಲಾ ಶಿಕ್ಷಕರ ಸಂಕಷ್ಟಕ್ಕೆ ಸ್ಪಂದಿಸಲು ಅನುದಾನರಹಿತ ಶಾಲೆಗಳಿಂದ ಶಿಕ್ಷಣ ಇಲಾಖೆ ಸಂಗ್ರಹಿಸಿರುವ ಶಿಕ್ಷಕರ ಕಲ್ಯಾಣ ನಿಧಿಯನ್ನು ಬಿಡುಗಡೆಗೊಳಿಸಬೇಕು ಎಂದು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮುರಳಿಧರ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಶಾಲೆ ಶಿಕ್ಷಕರಿಗೆ ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರದಿಂದ ಹಣಕಾಸಿನ ನೆರವಿನ ಅವಶ್ಯಕತೆ ಇದ್ದು, ಅನುದಾನರಹಿತ ಶಾಲೆಗಳಿಂದ ಶಿಕ್ಷಣ ಇಲಾಖೆ ಸಂಗ್ರಹಿರುವ ಶಿಕ್ಷಕರ ಕಲ್ಯಾಣನಿಧಿ ಹಾಗೂ ವಿದ್ಯಾರ್ಥಿಗಳ ಕಲ್ಯಾಣನಿಧಿ ಹಣವನ್ನು ಬಿಡುಗಡೆ ಮಾಡಿ ಖಾಸಗಿ ಶಿಕ್ಷಕರ ಸಂಕಷ್ಟಕ್ಕೆ ಸ್ಪಂದಿಸಬೇಕು. ರಾಜ್ಯದಲ್ಲಿ ಸುಮಾರು 50 ಸಾವಿರ ಅನುದಾನ ರಹಿತ ಖಾಸಗಿ ಶಾಲೆಗಳು ಇದ್ದು, 45 ಲಕ್ಷ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ ಎಂದರು.